Breaking News

ಛಲವಾದಿ ನಾರಾಯಣಸ್ವಾಮಿಯವರೇ, ಹಳೆ ಚಡ್ಡಿ ಹೊತ್ತುಕೊಂಡ ನಿಮ್ಮನ್ನು ಕಂಡು‌ ಮನಸ್ಸಿಗೆ ನೋವಾಯಿತು – ಸಿದ್ಧರಾಮಯ್ಯ

Spread the love

ಬೆಂಗಳೂರು: ಛಲವಾದಿ ನಾರಾಯಣ ಸ್ವಾಮಿಯವರೇ ( Chalavadi Narayanaswamy ), ಯಾರ್ಯಾರದೋ ಹಳೆ ಚಡ್ಡಿ ಹೊತ್ತುಕೊಂಡ ನಿಮ್ಮನ್ನು ಕಂಡು‌ ಮನಸ್ಸಿಗೆ ನೋವಾಯಿತು. ನಿಮ್ಮನ್ನು ಪಠ್ಯಪುಸ್ತಕ‌ ಪರಿಷ್ಕರಣ‌ ಸಮಿತಿಯ ಅಧ್ಯಕ್ಷತೆಯಂತಹ ಸ್ಥಾನದಲ್ಲಿ‌ ಕಾಣುವ ಆಸೆ ನನಗೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ( Ex CM Siddaramaiah ) ವ್ಯಂಗ್ಯವಾಡಿದ್ದಾರೆ.

 

ಈ ಕುರಿತು ಸರಣಿ ಟ್ವಿಟ್ ( Twitter ) ಮಾಡಿರುವ ಅವರು, ಛಲವಾದಿ ನಾರಾಯಣ ಸ್ವಾಮಿಯವರೇ, ನಿಮ್ಮ ಪ್ರತಿಭಟನೆಯ ಹಕ್ಕನ್ನು ನಾನು ಗೌರವಿಸುತ್ತೇನೆ. ಆದರೆ ಕೇವಲ ರಾಜಕೀಯ ಜಿದ್ದಾಜಿದ್ದಿಗಾಗಿ ಹಳೆಚಡ್ಡಿ ಹೊತ್ತುಕೊಳ್ಳಲೂ ಸಿದ್ಧರಾದ ನಿಮ್ಮ ಗುಲಾಮಿ‌ ಮನಸ್ಥಿತಿಗೆ ನನ್ನ ಧಿಕ್ಕಾರ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

 

 

ಈ ಬಗ್ಗೆ ಸರಣಿ ಟ್ವಿಟ್ ( Twitter ) ಮಾಡಿರುವಂತ ಅವರು, ಆರ್.ಎಸ್.ಎಸ್‌ ಗೆ ( RSS ) ಬೆಂಬಲ ನೀಡಲು ಹಳೆ ಚಡ್ಡಿ ಹೊತ್ತು ಕೊಂಡು ಮೆರವಣಿಗೆ ಮಾಡಿದ ನಾರಾಯಣಸ್ವಾಮಿಯವರೇ, ನಿಮ್ಮ ಸ್ಥಾನಮಾನ ಏನಿದ್ದರೂ ಇಷ್ಟಕ್ಕೆ ಸೀಮಿತ. ಆ ಸಂಘದ ಉನ್ನತ ಪದಾಧಿಕಾರಕ್ಕೆ ನೀವು ಸದಾ ಅಸ್ಪೃಶ್ಯ ನೆನಪಿರಲಿ ಎಂದಿದ್ದಾರೆ


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ