Breaking News

ಅತಿ ವೇಗವಾಗಿ ಬಂದ ಕಾರೊಂದು ಕಾಂಪೌಂಡ್‍ಗೆ ಡಿಕ್ಕಿ

Spread the love

ಬೆಂಗಳೂರು: ಅತಿ ವೇಗವಾಗಿ ಬಂದ ಕಾರೊಂದು ಕಾಂಪೌಂಡ್‍ಗೆ ಡಿಕ್ಕಿ ಹೊಡೆದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ರಾಜ್‍ಭವನ ರಸ್ತೆಯಲ್ಲಿ ನಡೆದಿದೆ.

ನಸುಕಿನ ಜಾವ ಸುಮಾರು 3 ಗಂಟೆ ವೇಳೆಗೆ ಕಾರೊಂದು ರಾಜ್‍ಭವನ ರಸ್ತೆಯಲ್ಲಿರುವ ಪ್ರಸಾರ ಭಾರತಿ ಗೋಡೆಗೆ ಡಿಕ್ಕಿ ಹೊಡೆದಿದೆ. ಚಾಲಕ ಕಾರನ್ನು ಅತಿ ವೇಗವಾಗಿ ಚಲಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ತಿರುವಿನಲ್ಲಿ ಕಾಂಪೌಂಡ್ ಒಳಗಡೆ ನುಗ್ಗಿಸಿದ್ದಾನೆ. ಘಟನೆಯಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಸದ್ಯ ಕಾಂಪೌಂಡ್ ಮೇಲಿಂದ ಕಾರನ್ನು ತೆರವುಗೊಳಿಸಲಾಗಿದೆ. ಘಟನೆ ಸಂಬಂಧಿಸಿ ಹೈಗ್ರೌಂಡ್ಸ್ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ