Breaking News

ʻ’ಈ ತಲೆಗಳ ಕಡಿದರೆ 20 ಲಕ್ಷ ರೂ.. ಖಾತೆಗೆ ಜಮಾʼ: ಮುತಾಲಿಕ್​, ಯಶ್​ಪಾಲ್​ ಪ್ರತಿಕ್ರಿಯೆ ಹೀಗಿದೆ.

Spread the love

ಕಾರ್ಕಳ: ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ಹಾಗೂ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಲೆ ಕಡಿದರೆ ತಲಾ 10 ಲಕ್ಷ ರೂಪಾಯಿ ನೀಡಲಾಗುವುದು ಎಂದು ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಪತ್ರ ಹರಿದಾಡುತ್ತಿದೆ. ಮಾರಿಗುಡಿ ಪೇಜಿನಲ್ಲಿ ಈ ರೀತಿಯಾಗಿ ಬಹಿರಂಗ ಬೆದರಿಕೆ ಹಾಕಲಾಗಿದೆ.

 

ʻಈ ಎರಡು ತಲೆ ಕಡಿದರೆ 20 ಲಕ್ಷ..! ಒಂದು ತಲೆಗೆ 10 ಲಕ್ಷ, ಇನ್ನೊಂದು ತಲೆಗೆ 10 ಲಕ್ಷ. ಕೂಡಲೇ ನಿಮ್ಮ ಖಾತೆಗೆ ಜಮಾ ಆಗುತ್ತದೆʼ ಹೀಗಂತ ಹೇಳಿ ಇಬ್ಬರ ವಿರುದ್ಧ ಕೊಲೆ ಬೆದರಿಕೆ ಹಾಕಲಾಗಿದೆ. 100% ಈ ಎರಡು ತಲೆ ಉರುಳೋದು ಖಚಿತ ಎಂದು ಮಾರಿಗುಡಿ ಎಂಬ ಪೇಜ್‌ನಲ್ಲಿ ಹೇಳಲಾಗಿದೆ.

ಈ ಸಂಬಂಧ ಕಾಪು ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಇನ್ ಸ್ಟಾಗ್ರಾಂ ಪೇಜ್ ವಿರುದ್ಧ ದೂರು ನೀಡಿದ್ದಾರೆ. ಮಾರಿಗುಡಿ ಪೇಜ್ ವಿರುದ್ಧ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳುವಂತೆ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ