Breaking News

ರೈಲಿನಲ್ಲಿ 2 ಕೋಟಿ ಸಾಗಿಸುತ್ತಿದ್ದವನ ಬಳಿ ಟಿಕೆಟ್ಟೇ ಇರಲಿಲ್ಲ..!

Spread the love

ಕಾರವಾರ; ಸಾಮಾನ್ಯವಾಗಿ ಹಣ ಇಲ್ಲದೇ ಇದ್ದವರು ರೈಲಿನಲ್ಲಿ ಟಿಕೆಟ್‌ ಇಲ್ಲದೆ ಕಳ್ಳತನವಾಗಿ ಪ್ರಯಾಣ ಮಾಡುತ್ತಾರೆ. ಆದ್ರೆ, ಮುಂಬೈನಿಂದ ಬರುತ್ತಿದ್ದ ವ್ಯಕ್ತಿಯ ಬಳಿಯ ರೈಲು ಟಿಕೆಟ್‌ ಇರಲಿಲ್ಲ, ಹಣ ಅಂತೂ ಸಾಕಷ್ಟಿತ್ತು. ಅದು ಅಷ್ಟೋ ಇಷ್ಟೂ ಅಲ್ಲ, ಬರೋಬ್ಬರಿ 2 ಕೋಟಿ ರೂಪಾಯಿ.

ಅದಕ್ಕೆ ದಾಖಲೆ ಇಲ್ಲದ ಕಾರಣಕ್ಕಾಗಿ ಆ ವ್ಯಕ್ತಿಯನ್ನು ಹಾಗೂ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಹೌದು, ವ್ಯಕ್ತಿಯೊಬ್ಬ ರೈಲಿನ ಮೂಲಕ ಮುಂಬೈನಿಂದ ಮಂಗಳೂರಿಗೆ 2 ಕೋಟಿ ರೂಪಾಯಿ ಹಣ ಸಾಗಿಸುತ್ತಿದ್ದ. ದಾಖಲೆ ರಹಿತ ಈ ಹಣವನ್ನು ಕಾರವಾರದ ರೈಲ್ವೆ ಪೊಲೀಸರು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಮನೋಹರ್ ಸಿಂಗ್ ಅಲಿಯಾಸ್ ಚೇನ್ ಸಿಂಗ್ ಬಂಧಿತ ಆರೋಪಿ. ಮಂಗಳೂರು ಎಕ್ಸ್‍ಪ್ರೆಸ್ ರೈಲಿನಲ್ಲಿ ಟಿಕೆಟ್ ಪಡೆಯದೆ ಪ್ರಯಾಣಿಸುತಿದ್ದ ಮನೋಹರ್ ಸಿಂಗ್‍ನನ್ನು ಕಾರವಾರದ ಬಳಿ ರೈಲ್ವೆ ಪೊಲೀಸರು ದಂಡ ವಿಧಿಸಿದ್ದರು. ಈ ವೇಳೆ ಅನುಮಾನಗೊಂಡ ರೈಲ್ವೆ ಪೊಲೀಸರು ಈತನ ಬಳಿ ಇದ್ದ ಬ್ಯಾಗ್ ತಪಾಸಣೆಗೆ ಮಾಡಿದಾಗ,ಬ್ಯಾಗ್‌ನಲ್ಲಿ 100 ಬಂಡಲ್‍ನ 2 ಕೋಟಿ ಹಣ ಪತ್ತೆಯಾಗಿದೆ.


Spread the love

About Laxminews 24x7

Check Also

ಜೂನ್ ಒಳಗೆ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ

Spread the loveಕಾರವಾರ: ಜೂನ್ ಒಳಗೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ