Breaking News

ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಅವಘಡ 20ಕ್ಕೂ ಹೆಚ್ಚು ಜನರಿಗೆ ಗಾಯ

Spread the love

ಕಾಲೇಜು ಬಸ್ಸಿನ ಹಿಂಬದಿಗೆ ಕೆಎಸ್‌ಆರ್‌ಟಿ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿಗಳು ಸೇರಿದಂತೆ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದ ಬಳಿ ಸಂಭವಿಸಿದೆ.ಜತ್ತ-ಜಾಂಬೋಟಿ ಹೆದ್ದಾರಿ ಸಮೀಪ ಗುರ್ಲಾಪುರ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ.

ಮೂಡಲಗಿ ಖಾಸಗಿ ಕಾಲೇಜಿಗೆ ತೆರಳುತ್ತಿದ್ದ ಕಾಲೇಜು ಬಸ್‌ನಲ್ಲಿದ್ದ ೧೦ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ ೧೦ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು. ಇದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಇನ್ನು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳಲು ನಿಂತಿದ್ದ ಕಾಲೇಜು ಬಸ್ಸಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿದ್ದರಿಂದ ಈ ದುರಂತ ಸಂಭವಿಸಿದೆ. ಸ್ಥಳಕ್ಕೆ ಮೂಡಲಗಿ ಠಾಣೆ ಪೊಲೀಸರು ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬAಧ ಮೂಡಲಗಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Spread the love

About Laxminews 24x7

Check Also

ಜಾತಿಗಣತಿ ವರದಿ ಇನ್ನೊಂದು ತಿಂಗಳಲ್ಲಿ ಬಿಡುಗಡೆ ಮಾಡ್ತೀವಿ: ಸಿದ್ದರಾಮಯ್ಯ

Spread the loveರಾಯಚೂರು: ಜಾತಿಗಣತಿ ವರದಿ ಇನ್ನೊಂದು ತಿಂಗಳಲ್ಲಿ ಬಿಡುಗಡೆ ಮಾಡುತ್ತೇವೆ. ಬಹಳ ಹೆಚ್ಚು ಅಂದ್ರೆ ಎರಡು ತಿಂಗಳಾಗಬಹುದು ಎಂದು ಮುಖ್ಯಮಂತ್ರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ