ನಿನ್ನೆ ರಾತ್ರಿ ಹಿರೇ ಬಾಗೇವಾಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಅಕ್ರಮವಾಗಿ ಗೋಮಾಂಸವನ್ನು ಸಾಗಿಸುತ್ತಿದ್ದ ಪುಂಡರಿಗೆ ಹೆಡೆಮುರಿ ಕಟ್ಟಿದ್ದಾರೆ.
ಹೌದು ಹಿರೇಬಾಗೇವಾಡಿ ಠಾಣೆ ಸಿಪಿಐ ವಿಜಯಕುಮಾರ್ ಸಿನ್ನೂರ್ ಮಾರ್ಗದರ್ಶನದಲ್ಲಿ ಪಿಎಸ್‍ಐ ಶಶಿಕುಮಾರ್ ಕೊರಲೆ ನೇತೃತ್ವದಲ್ಲಿ ಈ ದಾಳಿ ಮಾಡಲಾಗಿದ್ದು.
ನಿನ್ನೆ ರಾತ್ರಿ ಸುಮಾರು 2.30ರ ಸುಮಾರಿಗೆ ಹಾಲಗಿಮರಡಿ ಕ್ರಾಸ್ ಮೂಲಕ ಎರಡು ವ್ಯಾನ್‍ಗಳಲ್ಲಿ ಗೋವಾಗೆ ಗೋಮಾಂಸವನ್ನು ಸಾಗಿಸುತ್ತಿದ್ದರು.
ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು ಗೋಮಾಂಸ ಸಮೇತ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳು ಗೋವಾದ ಮಡಗಾವ್‍ನ ಹುಸೇನ್ ದೇಸಾಯಿ, ಆಜಾದ್ ಕಾದ್ರೊಳ್ಳಿ ಎಂದು ಗುರುತಿಸಲಾಗಿದೆ.
ಆರೋಪಿಗಳನ್ನು ಬಂಧಿಸುವ ವೇಳೆ ಪೊಲೀಸ್ ಸಿಬ್ಬಂದಿ ನಾಗಪ್ಪ ಸುತಗಟ್ಟಿ ಕೂಡ ಭಾಗಿಯಾಗಿದ್ದರು. ಈ ಸಂಬ0ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7