Breaking News

ಮೂರು ನಂಬರ್‌ನಿಂದ ನನಗೆ ಕಿರಿಕಿರಿ, ಧಮ್ಕಿ, ಬೆದರಿಕೆ ಕರೆ ಬರುತ್ತಿದೆ: ಪ್ರಮೋದ್ ಮುತಾಲಿಕ್

Spread the love

ಹುಬ್ಬಳ್ಳಿ: ಮೂರು ನಂಬರ್‌ನಿಂದ ನನಗೆ ಕಿರಿಕಿರಿ, ಧಮ್ಕಿ, ಬೆದರಿಕೆ ಕರೆ ಬರುತ್ತಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದರು.

ಪ್ರಮೋದ್ ಮುತಾಲಿಕ್ ವಿರುದ್ಧ ಇನ್‍ಸ್ಟಾಗ್ರಾಮ್‍ನಲ್ಲಿ ಜೀವ ಬೆದರಿಕೆ ಪೋಸ್ಟ್ ಮಾಡಲಾಗಿತ್ತು. ಈ ಹಿನ್ನೆಲೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ ಮುತಾಲಿಕ್ ಅವರು ಮನವಿ ಸಲ್ಲಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡು ದಿನದ ಹಿಂದೆ ಮಾರಿಗುಡಿ ಗ್ರೂಪ್‍ನಲ್ಲಿ ನನಗೆ ಕೊಲೆ ಬೆದರಿಕೆ ಹಾಕಲಾಗಿತ್ತು. ಸದ್ಯ ಪೊಲೀಸ್ ಆಯುಕ್ತರ ಜೊತೆ ಚರ್ಚೆ ಮಾಡಿದ್ದೇನೆ ಎಂದು ತಿಳಿಸಿದರು.

ಮೂರು ನಂಬರ್‌ನಿಂದ ನನಗೆ ಕಿರಿಕಿರಿ, ಧಮ್ಕಿ, ಅಶ್ಲೀಲ ಶಬ್ಧ ಬಳಸಿ ಬೆದರಿಕೆ ಹಾಕುತ್ತಿದ್ದಾರೆ. ಆ ಮೂರು ನಂಬರ್ ಕೂಡಾ ದೂರಿನಲ್ಲಿ ಉಲ್ಲೇಖ ಮಾಡಿದ್ದೇನೆ. ಇದಕ್ಕೆ ಹಿಂದೇಟು ಹಾಕಿ ಸುಮ್ಮನೆ ಕುಳಿತುಕೊಳ್ಳುವ ಮಾನಸಿಕತೆ ನನಗಿಲ್ಲ. ನಾವು ವಾಸ ಮಾಡುವ ಸ್ಥಳೀಯ ಠಾಣೆಗೆ ದೂರನ್ನ ಕೊಡಲು ಹೇಳಿದ್ದಾರೆ. ಅದನ್ನ ನಾನು ಮಾಡುತ್ತೇನೆ ಎಂದರು.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ