Breaking News

ಕಬ್ಬು ಬೆಳೆಗಾರರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಫ್‌ಆರ್‌ಪಿಪಿ ದರ ಹೆಚ್ಚಿಸುವ ವಿಚಾರದಲ್ಲಿ ಮೋಸ ಮಾಡುತ್ತಿವೆ

Spread the love

ಕಬ್ಬು ಬೆಳೆಗಾರರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಫ್‌ಆರ್‌ಪಿಪಿ ದರ ಹೆಚ್ಚಿಸುವ ವಿಚಾರದಲ್ಲಿ ಮೋಸ ಮಾಡುತ್ತಿವೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಈ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿ ಡಿಸಿ ಕಚೇರಿ ಮುಂದೆ ಗುರುವಾರ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ವಿರುದ್ಧ ರೈತ ಹೋರಾಟಗಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು

ಈ ವೇಳೆ ಮಾತನಾಡಿದ ರೈತ ಮುಖಂಡ ಚೂನಪ್ಪ ಪೂಜಾರಿ ಕಬ್ಬು ಬೆಳೆಗಾರರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮೊದಲು 9.5 ರಿಕವರಿ ಇದ್ದಿದ್ದನ್ನು 10 ಮಾಡಿ, 100 ರೂಪಾಯಿ ಜಾಸ್ತಿ ಮಾಡಿ ಸುಮಾರು ನಾಲ್ಕು ವರ್ಷ 20 ರೂಪಾಯಿಗಳಂತೆ ಹೆಚ್ಚಿಗೆ ಮಾಡಿ ಅವತ್ತು ಮೋಸ ಮಾಡಿದ್ದರು. ಇಂದು 150 ರೂಪಾಯಿ ಎಫ್‍ಆರ್‍ಪಿ ಹೆಚ್ಚಿಗೆ ಮಾಡಿದ್ದೇವೆ 2900 ರೂಪಾಯಿ ಇದ್ದಿದ್ದನ್ನು 3050 ರೂಪಾಯಿ ಹೆಚ್ಚು ಮಾಡಿದ್ದೇವೆ ಎಂದು ಹೇಳುತ್ತಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ