Breaking News

ಜೂನ್ 11 ರ ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯ: ನಿತೇಶ್ ಪಾಟೀಲ

Spread the love

ಬೆಳಗಾವಿ: ವಿಧಾನ ಪರಿಷತ್ತಿನ ವಾಯವ್ಯ ಶಿಕ್ಷಕರ ಹಾಗೂ ವಾಯವ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 13 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜೂನ್ 11 ರ ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಪ್ರಜಾ ಪ್ರತಿನಿಧಿ ಕಾಯ್ದೆ 1951 ರ ಸೆಕ್ಷನ್ 126 ರ ಪ್ರಕಾರ ಮತದಾನ ಮುಕ್ತಾಯವಾಗುವ 48 ಗಂಟೆಗಳ ಮುನ್ನ ಸಾರ್ವಜನಿಕ ಸಭೆ, ಸಮಾರಂಭ ಹಾಗೂ ಬಹಿರಂಗ ಪ್ರಚಾರ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾಗಿರುವ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಆದೇಶ ಹೊರಡಿಸಿರುವ ಅವರು, ಜಿಲ್ಲೆಯಾದ್ಯಂತ ರ್ಯಾಲಿ, ಬಹಿರಂಗ ಸಭೆಗಳನ್ನು ಆಯೋಜಿಸುವುದು, ಉದ್ದೇಶಿಸಿ ಮಾತನಾಡುವುದನ್ನು ನಿಷೇಧಿಸಲಾಗಿದೆ.


Spread the love

About Laxminews 24x7

Check Also

ಮೂಡಲಗಿ ವಲಯದ ಅತಿಥಿ ಶಿಕ್ಷಕರ ವೇತನ ವಿತರಿಸಿದ ಸರ್ವೋತ್ತಮ ಜಾರಕಿಹೊಳಿ*

Spread the love ಗೋಕಾಕ-* ಧಾರವಾಡ ವಲಯದಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯದ ಸಾಧನೆಯನ್ನು ಮೆಚ್ಚುವಂತಹದ್ದು, ಅದರಲ್ಲಿಯೂ ಅತಿಥಿ ಶಿಕ್ಷಕರನ್ನು ಇಟ್ಟುಕೊಂಡು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ