Breaking News

ಕಲಬುರ್ಗಿಯಲ್ಲಿ ಲಕ್ಷ್ಮಣ್ ಸವದಿ ಸಭೆ,ಮನುಷ್ಯ ಬದುಕಿರುವಷ್ಟು ದಿನ ಸಂಕಷ್ಟದಲ್ಲಿರುವವರ ಕಣ್ಣೀರೊರೆಸುವ ಕಾರ್ಯ ಮಾಡಬೇಕು.

Spread the love

ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿಯ ಉತ್ತರ ಮಂಡಲದ ನಾಯಕರು, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಬೆಂಗಳೂರು ಅಧ್ಯಕ್ಷರಾದ ಶ್ರೀ ಚಂದು ಪಾಟೀಲ ಅವರ ಜನ್ಮದಿನದ ಅಂಗವಾಗಿ ಅಭಿಮಾನಿ ಬಳಗದಿಂದ ಕಲಬುರ್ಗಿಯಲ್ಲಿ ಜರುಗಿದ ೫೦೦೧ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಲಾಯಿತು.

ಮನುಷ್ಯ ಬದುಕಿರುವಷ್ಟು ದಿನ ಸಂಕಷ್ಟದಲ್ಲಿರುವವರ ಕಣ್ಣೀರೊರೆಸುವ ಕಾರ್ಯ ಮಾಡಬೇಕು. ನಮ್ಮ ಕೈಲಾದಷ್ಟು ದಾನ, ಧರ್ಮ, ಪರೋಪಕಾರ, ಸಮಾಜ ಸೇವಾ ಕಾರ್ಯ ಮಾಡಿದರೆ ನಮ್ಮ ಬದುಕು ಸಾರ್ಥಕವಾಗುತ್ತದೆ. ಆದ್ದರಿಂದ ಜನಮನದಲ್ಲಿ ಶಾಶ್ವತವಾಗಿ ನೆಲೆಸುವಂತಹ ಕಾರ್ಯಗಳನ್ನು ನಿರಂತರವಾಗಿ ಪ್ರತಿಯೊಬ್ಬರೂ ಮಾಡಬೇಕು.

ಈ ಸಂದರ್ಭದಲ್ಲಿ ಶ್ರೀ ಅವಧೂತ ವಿನಯ ಗುರೂಜಿ , ಶ್ರೀ ಸಾರಂಗದರ ದೇಶಿಕೇಂದ್ರ ಜಗದ್ಗೂರು ಶ್ರೀ ಗುರುಪಾದಲಿಂಗ ಸ್ವಾಮೀಜಿ, ಶ್ರೀ ರೇವಣಸಿದ್ಧ ಶಿವಾಚಾರ್ಯರು, ಡಾ. ಗುರುಮೂರ್ತಿ ಶಿವಾಚಾರ್ಯರು ಸೇರಿದಂತೆ ಹಲವಾರು ಸ್ವಾಮೀಜಿಗಳು ಸಾನ್ನಿಧ್ಯ ವಹಿಸಿದ್ದರು. ವಿಪ ಸದಸ್ಯರಾದ ಶ್ರೀ ಬಿ.ಜಿ. ಪಾಟೀಲ, ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಮಾಜಿ ಶಾಸಕರು, ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ಮಾಲೀಕಯ್ಯ ಗುತ್ತೇದಾರ ಸೇರಿದಂತೆ ಹಲವು ಗಣ್ಯಮಾನ್ಯರು, ಚಂದು ಪಾಟೀಲ ಅವರ ಅಭಿಮಾನಿಗಳು ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಸರ್ಕಾರಿ ವೈದ್ಯರು, ನರ್ಸ್​ಗಳಿಗೆ ಗ್ರಾಮೀಣ ಸೇವೆ ಕಡ್ಡಾಯ

Spread the loveಬೆಂಗಳೂರು: ನಗರ ಪ್ರದೇಶಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್​ಗಳು ಸೇರಿದಂತೆ ಇತರ ಸಿಬ್ಬಂದಿ ಇನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ