Breaking News

ಪದವೀಧರ, ಶಿಕ್ಷಕರ ಪರಿಷತ್ ಚುನಾವಣೆ: ರಾಜ್ಯ ಸರ್ಕಾರದಿಂದ ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ನೀಡಿ ಆದೇಶ

Spread the love

ಬೆಂಗಳೂರು: 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ ( Graduate, Teachers’ Council elections ) ದಿನಾಂಕ 13-06-2022ರಂದು ನಡೆಯಲಿದೆ. ಈ ಹಿನ್ನಲೆಯಲ್ಲಿ ಅಂದು ರಾಜ್ಯ ಸರ್ಕಾರದಿಂದ ಮತದಾನದಲ್ಲಿ ಭಾಗಿಯಾಗಲಿರುವಂತ ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ( Special casual leave ) ನೀಡಿ, ರಾಜ್ಯ ಸರ್ಕಾರ ಆದೇಶಿಸಿದೆ.

 

ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ದಿನಾಂಕ 13-06-2022ರಂದು ವಿಧಾನಪರಿಷತ್ತಿನ ವಾಯುವ್ಯ ಪದವೀಧರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರ ಹಾಗೂ ವಾಯುವ್ಯ ಶಿಕ್ಷಕರ, ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ ಎಂದು ತಿಳಿಸಿದ್ದಾರೆ.

 

ಮತದಾನ ನಡೆಯಲಿರುವಂತ ವಾಯುವ್ಯ ಪದವೀಧರ ಕ್ಷೇತ್ರದ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ, ದಕ್ಷಿಣ ಪದವೀಧರ ಕ್ಷೇತ್ರದ ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ಜಿಲ್ಲೆಗಳು, ವಾಯುವ್ಯ ಶಿಕ್ಷಕರ ಕ್ಷೇತ್ರದ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ, ಪಶ್ಚಿಮ ಶಿಕ್ಷಕರ ಕ್ಷೇತ್ರದ ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಡೆಯಲಿದೆ.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ