Breaking News

ಶಿಕ್ಷಣ ಇಲಾಖೆಯಿಂದಲೇ ಪಠ್ಯ ಲೋಪ ಸರಿಪಡಿಸುವ ಕೆಲಸ ಆರಂಭ

Spread the love

ಬೆಂಗಳೂರು : ಶಿಕ್ಷಣ ಇಲಾಖೆಯು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಸಮಾಜ ಸುಧಾರಕ ಬಸವಣ್ಣ ಸೇರಿದಂತೆ ಹಲವು ದಾರ್ಶನಿಕರಿಗೆ ಸಂಬಂಧಿಸಿದ ಪಠ್ಯಗಳಲ್ಲಿನ ಆಕ್ಷೇಪಾರ್ಹ ವಿಚಾರಗಳನ್ನು ಸಪರಿಸುವ ಪ್ರಕ್ರಿಯೆ ಆರಂಭಿಸಿದೆ.

 

ಶಿಕ್ಷಣ ಇಲಾಖೆಯ ಪ್ರಮುಖ ಅಧಿಕಾರಿಗಳಿಗೇ ಪಠ್ಯ ಲೋಪ ಸರಿಪಡಿಸುವ ಅಧಿಕಾರ ನೀಡಲಾಗಿದೆ.

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಸಮಿತಿ ಪರಿಷ್ಕರಿಸಿರುವ 1 ರಿಂದ 10 ನೇ ತರಗತಿವರೆಗಿನ ಕನ್ನಡ ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷಾ ವಿಷಯದ ಪಠ್ಯಗಳು ಹಾಗೂ 6 ರಿಂದ 10 ನೇ ತರಗತಿವರೆಗಿನ ಸಮಾಜ ವಿಜ್ಞಾನ ಪಠ್ಯ ಪುಸ್ತಕಗಳಲ್ಲಿರುವ ಆಕ್ಷೇಪಾರ್ಹ ಅಂಶಗಳನ್ನು ಪರಿಷ್ಕರಿಸಿ ಲೋಪಗಳಾಗಿದ್ದರೆ ಸರಿಪಡಿಸಲು ಅಧಿಕಾರಿಗಳಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚನೆ ನೀಡಿದ್ದಾರೆ.

 

ಇನ್ನು ಪಠ್ಯದಲ್ಲಿ ಪ್ರಮುಖವಾಗಿ ಅಂಬೇಡ್ಕರ್ ಅವರ ಬಗೆಗಿನ ಪಾಠದಲ್ಲಿ ಬಿಟ್ಟು ಹೋಗಿರುವ ಸಂವಿಧಾನ ಶಿಲ್ಪಿ ಗೌರವವನ್ನು ಮರು ಸೇರ್ಪಡೆ ಮಾಡುವುದು ಮತ್ತು ಕಡಿತಗೊಳಿಸಿರುವ ಅವರ ಜನನ, ಊರು, ತಂದೆ-ತಾಯಿ ಇತರ ಮಾಹಿತಿಯನ್ನು ಹಿಂದೆ ಇದ್ದಂತೆ ಸೇರಿಸಲು ಸೂಚಿಸಲಾಗಿದೆ.


Spread the love

About Laxminews 24x7

Check Also

ನಮಗೆ ಇ.ಡಿ ಸಮನ್ಸ್ ಮೂಲಕ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Spread the loveಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ