Breaking News

ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಗೋಕಾಕ್, ಹುಕ್ಕೇರಿ, ಹಾಗೂ ಅಥಣಿಯ ಎಲ್ಲಾ ಸಾಹುಕಾರ್‍ಗಳು ಸೇರಿ ಕೆಲಸ ಮಾಡುತ್ತೇವೆ:ಬಾಲಚಂದ್ರ ಜಾರಕಿಹೊಳಿ

Spread the love

ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಗೋಕಾಕ್, ಹುಕ್ಕೇರಿ, ಹಾಗೂ ಅಥಣಿಯ ಎಲ್ಲಾ ಸಾಹುಕಾರ್‍ಗಳು ಸೇರಿ ಕೆಲಸ ಮಾಡುತ್ತೇವೆ ಎಂದು ಹೇಳುವ ಮೂಲಕ ಶಾಸಕ ಬಾಲಚಂದ್ರ ಜಾರಕಿಹೊಳಿ ಒಗ್ಗಟ್ಟಿನ ಮಂತ್ರವನ್ನು ಪಠಿಸಿದ್ದಾರೆ.

ವಾಯುವ್ಯ ಪದವೀಧರ, ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ ಬೆಳಗಾವಿ ನಗರದಲ್ಲಿ ಪ್ರಚಾರದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ, ವಾಯುವ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಪ್ರಾಮಾಣಿಕವಾಗಿ ಚುನಾವಣೆ ಮಾಡುತ್ತಿದ್ದೇವೆ.

ಎಲ್ಲಾ ಸಾಹುಕಾರ್ ಗಳು ಒಗ್ಗೂಡಿ ಕೆಲಸ ಮಾಡುತ್ತೇವೆ. ಗೋಕಾಕ, ಹುಕ್ಕೇರಿ, ಅಥಣಿ ಸಾಹುಕಾರ್ ಎಲ್ಲರೂ ಕೂಡಿ ಕೆಲಸ ಮಾಡುತೇವೆ. ಲಖನ್ ಜಾರಕಿಹೊಳಿ ಬೆಂಬಲ ಬಗ್ಗೆ ಸಾರ್ವಜನಿಕ ಚರ್ಚೆ ಬೇಡ. ಈ ಕುರಿತಂತೆ ಸಿಎಂ ಹಾಗೂ ರಾಜ್ಯಾಧ್ಯಕ್ಷರು ನಿರ್ಧಾರ ಮಾಡುತ್ತಾರೆ. ಈ ಬಗ್ಗೆ ಬಹಿರಂಗ ಚರ್ಚೆ ಬೇಡ ಎಂದರು..

 


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ