ನಿನ್ನೆ ಮೂರು ರಾಜ್ಯಸಭೆ ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಪ್ರಚಂಡ ವಿಜಯ ಸಾಧಿಸಿದೆ. ಜೂನ್ 13ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ ನಾಲ್ಕಕ್ಕೆ ನಾಲ್ಕು ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಚಿವ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಗೋವಿಂದ ಕಾರಜೋಳ ಅತ್ಯಂತ ಉತ್ಸಾಹದಿಂದ ಪದವೀಧರರು, ಶಿಕ್ಷಕರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಇಡೀ ದೇಶದ ಉದ್ದಗಲಕ್ಕೂ ಬಿಜೆಪಿಯೇ ಅಧಿಕಾರದಲ್ಲಿ ಇರಬೇಕು ಎಂಬ ಆಶಯ ದೇಶದ ವಿದ್ಯಾವಂತರಲ್ಲಿದೆ.
ದೇಶದಲ್ಲಿ ನರೇಂದ್ರ ಮೋದಿ, ರಾಜ್ಯದಲ್ಲಿ ಸಿಎಂ ಬೊಮ್ಮಾಯಿವರ ಆಡಳಿತ ನೋಡಿ ಬಹಳ ಪ್ರೀತಿ, ವಿಶ್ವಾಸದಿಂದ ನಮ್ಮನ್ನು ಬೆಂಬಲಿಸುತ್ತಿದ್ದಾರೆ. ನಾಲ್ಕಕ್ಕೆ ನಾಲ್ಕು ಸ್ಥಾನ ಗೆಲ್ಲುತ್ತೇವೆ. ಇಲ್ಲಿ ಹಣಮಂತ ನಿರಾಣಿ, ಅರುಣ ಶಾಹಪುರ ಅತೀ ಹೆಚ್ಚು ಮತಗಳ ಅಂತರದಿಂದ ಗೆದ್ದು ಬರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.