Breaking News

ಶಾಸಕರ ತಿಥಿ ಹಾಗೂ ಮಾಜಿ ಮುಖ್ಯಮಂತ್ರಿಯ ಕೈಲಾಸ ಸಮಾರಾಧನೆ ಕಾರ್ಡ್ ಮಾಡಿ ವಿಕೃತಿ

Spread the love

ತುಮಕೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದರಿಂದ ಉಂಟಾಗಿರುವ ಅಡ್ಡಪರಿಣಾಮ ಶಾಸಕರ ತಿಥಿ ಹಾಗೂ ಮಾಜಿ ಮುಖ್ಯಮಂತ್ರಿಯ ಕೈಲಾಸ ಸಮಾರಾಧನೆ ಕಾರ್ಡ್ ಮಾಡಿ ವಿಕೃತಿ ಮೆರೆಯುವ ಮಟ್ಟಕ್ಕೆ ತಲುಪಿದೆ.

ಶುಕ್ರವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಅಡ್ಡ ಮತದಾನ ಮಾಡಿದ್ದರು.

ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗರಂ ಆಗಿದ್ದರು. ಶನಿವಾರ ಬೆಳಗ್ಗೆ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ಶ್ರೀನಿವಾಸ್​, ತಾಕತ್ತಿದ್ದರೆ ನನ್ನ ಕ್ಷೇತ್ರದಲ್ಲಿ ನನ್ನ ವಿರುದ್ಧ ಚುನಾವಣೆಗೆ ಬಂದು ಸ್ಪಧಿಸಿ ಗೆಲ್ಲಲಿ. ಅವನು ಗೆದ್ದರೆ ನನ್ನ ಜೀವನಪೂರ್ತಿ ಆತನ ಮನೆಯಲ್ಲೇ ಕೂಲಿ ಕೆಲಸ ಮಾಡುವೆ ಎಂದು ಓಪನ್​ ಚಾಲೆಂಜ್​ ಮಾಡಿದ್ದರು.

ಅಷ್ಟೇ ಅಲ್ಲದೆ ಇಂದು ತುಮಕೂರಲ್ಲಿ ಶ್ರೀನಿವಾಸ್​ರ ಮನೆ ಮುಂದೆ ಜೆಡಿಎಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಶ್ರೀನಿವಾಸ್​ ಪರ ಇವರ ಅಭಿಮಾನಿಗಳೂ ಪ್ರತಿಭಟನೆ ನಡೆಸಿದ್ದರು. ಇಷ್ಟೆಲ್ಲಾ ಬೆಳವಣಿಗೆ ನಡುವೆ ಶ್ರೀನಿವಾಸ್​ ಹೆಸರಲ್ಲಿ ತಿಥಿ ಕಾರ್ಡ್​ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

 

ಇದೀಗ ಮತ್ತೊಂದು ಹಂತಕ್ಕೆ ತಲುಪಿದ್ದು, ಶ್ರೀನಿವಾಸ್ ತಿಥಿ ಕಾರ್ಡ್​ ಮಾಡಿ ಹಂಚಿದ್ದಕ್ಕೆ ಪ್ರತಿಯಾಗಿ ಎಚ್​ಡಿಕೆ ವೈಕುಂಠ ಸಮಾರಾಧನೆಯ ಕಾರ್ಡ್ ಮಾಡಿ ಸೋಷಿಯಲ್ ಮೀಡಿಯಾ ಮೂಲಕ ಹಂಚಲಾಗುತ್ತಿದೆ.

ಜೂನ್ 22ರಂದು ಬಿಡದಿಯ ತೋಟದ ಮನೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ತಿಥಿ ಕಾರ್ಯ ಇದೆ ಎಂದು ಕಾರ್ಡ್​ನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ದುಃಖತಪ್ತರು ಎಂದು ರಾಧಿಕಾ ಕುಮಾರಸ್ವಾಮಿ ಹೆಸರನ್ನೂ ಹಾಕಲಾಗಿದೆ.

  


Spread the love

About Laxminews 24x7

Check Also

ಮತ್ತೆ ಪಾಚಿಕಟ್ಟಿದ ಸುವರ್ಣ ಸೌಧ:

Spread the loveಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಬೆಳಗಾವಿಯ ಸುವರ್ಣ ವಿಧಾನಸೌಧ ಮತ್ತೆ ಪಾಚಿಕಟ್ಟಿದೆ. ಸ್ವಚ್ಛತೆಗೆ ಅನುದಾನ ಕೊರತೆ ಎದುರಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ