ಬೆಂಗಳೂರು: ಕರ್ನಾಟಕದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ವಿಧಾನ ಪರಿಷತ್ತಿಗೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಹಲವಾರು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಸೋಮವಾರ, ಅಂದರೆ ಜೂನ್ 13 ರಂದು ರಜೆ ಘೋಷಿಸಿದೆ.
ವಿಜಯಪುರ, ಬಾಗಲಕೋಟೆ, ಬೆಳಗಾವಿ, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ರಜೆ ಘೋಷಿಸಲಾಗಿದೆ.
ಇದಲ್ಲದೆ, ಸರ್ಕಾರಿ-ಅನುದಾನಿತ, ಅನುದಾನರಹಿತ ಮತ್ತು ಖಾಸಗಿ ಶಾಲೆಗಳು ಮತ್ತು ಕಾಲೇಜುಗಳು ( School and College ), ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳು, ಕಾರ್ಖಾನೆಗಳು, ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕುಗಳು, ಸಹಕಾರಿ ಸಂಘಗಳು ಮತ್ತು ಇತರ ಎಲ್ಲಾ ಸಂಸ್ಥೆಗಳಿಗೆ ಸೇರಿದ ಪದವೀಧರರು ಮತ್ತು ಶಿಕ್ಷಕರಿಗೆ ಒಂದು ದಿನದ ರಜೆಯನ್ನು ನೀಡಲಾಗಿದೆ.