Breaking News

ಇಂದು ವಿಧಾನ ಪರಿಷತ್‌ನ 4 ಸ್ಥಾನಗಳಿಗೆ ಚುನಾವಣೆ :

Spread the love

ಇಂದು ವಿಧಾನ ಪರಿಷತ್ ನ 4 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗವು ಸಕಲ ಸಿದ್ಧತೆ ಮಾಡಿಕೊಂಡಿದೆ. ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಶನಿವಾರ ಸಂಝೆ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದ್ದು, ಇಂದು ಮತದಾನದ ನಡೆಯಲಿದೆ.

 

ಇಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಜೂನ್ 15 ರ ಬುಧವಾರ ಮತ ಎಣಿಕೆ ನಡೆದು, ಫಲಿತಾಂಶ ಪ್ರಕಟವಾಗಲಿದೆ. ವಾಯುವ್ಯ ಪದವೀಧರ ಕ್ಷೇತ್ರ, ಪಶ್ಚಿಮ ಶಿಕ್ಷಕರ ಕ್ಷೇತ್ರ, ವಾಯುವ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಪದವೀಧರರ ಕ್ಷೇತ್ರದಲ್ಲಿ ಶಾಂತಿಯುತ ಮತದಾನ ಪ್ರಕ್ರಿಯೆ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ದತೆ ಕೈಗೊಂಡಿದೆ.

ಮತದಾನಕ್ಕೆ ಗುರುತಿನ ಚೀಟಿ: ಭಾರತ ಚುನಾವಣಾ ಆಯೋಗದ ನಿರ್ದೇಶನಗಳಂತೆ ಇಂದು ಅರ್ಹ ಮತದಾರರು ತಮ್ಮ ಮತವನ್ನು ಚಲಾಯಿಸಲು ಚುನಾವಣಾ ಗುರುತಿನ ಚೀಟಿ ಅಥವಾ ಚುನಾವಣಾ ಆಯೋಗ ನಿಗದಿಪಡಿಸಿರುವ ದಾಖಲೆಗಳನ್ನು ಸಹ ಬಳಸಿ ಮತ ಚಲಾಯಿಸಬಹುದು.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ