Breaking News

ಬೆಂಗಳೂರಿನ ಇಡಿ ಕಚೇರಿ ಎದುರು ಪ್ರತಿಭಟಿಸುತ್ತಿದ್ದ ಕಾಂಗ್ರೆಸ್​ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Spread the love

ಬೆಂಗಳೂರು: ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಗೆ ಜಾರಿ ನಿರ್ದೇಶನಾಲಯವು ನೋಟಿಸ್ ನೀಡಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ಬೆಂಗಳೂರಿನ ಇಡಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ನಗರದ ಲಾಲ್ ಬಾಗ್ ಗೇಟ್ ಮುಂಭಾಗದಲ್ಲಿ ಪ್ರತಿಭಟನೆ ಆರಂಭಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಇಡಿ ಕಚೇರಿಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು.

ಲಾಲ್ ಬಾಗ್ ಗೇಟ್​​ನಿಂದ ಶಾಂತಿನಗರದ ಟಿಡಿಎಂಸಿ ಬಳಿಯ ಇಡಿ ಕಚೇರಿಗೆ ಕಾಲ್ನಡಿಗೆ ಮೂಲಕ ಮೆರವಣಿಗೆ ನಡೆಸಿ, ಕೇಂದ್ರ ಸರ್ಕಾರ, ಪ್ರಧಾನಿ ಮೋದಿ ಹಾಗೂ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್​​ ಪ್ರತಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ರಾಮಲಿಂಗಾರೆಡ್ಡಿ, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ಆರ್.ವಿ. ದೇಶಪಾಂಡೆ, ಶಾಸಕರಾದ ಹ್ಯಾರಿಸ್, ರಂಗನಾಥ್, ಎಂಎಲ್​ಸಿ ಯು.ಬಿ. ವೆಂಕಟೇಶ್ ಮತ್ತಿತರ ಮುಖಂಡರು ಭಾಗವಹಿಸಿದ್ದರು.

ಪೊಲೀಸ್​ ವಶಕ್ಕೆ: ಬಳಿಕ ಲಾಲ್ ಬಾಗ್ ಗೇಟ್​​ನಿಂದ ಶಾಂತಿನಗರದ ಟಿಟಿಎಂಸಿಯಲ್ಲಿನ ಇಡಿ ಕಚೇರಿಗೆ ಕೈ ಕಾರ್ಯಕರ್ತರ ಜೊತೆಗೂಡಿ ಕೈ ನಾಯಕರು ಪ್ರತಿಭಟನಾ ಮೆರವಣಿಗೆ ನಡೆಸಿದರು. ನೂರಾರು ಕಾರ್ಯಕರ್ತರು ಈ ವೇಳೆ ಸಾಥ್​ ನೀಡಿದರು. ಬಿಜೆಪಿ ಶಾಂತಿನಗರ ಬಸ್ ನಿಲ್ದಾಣ ಸಿಗ್ನಲ್ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ಪ್ರತಿಭಟನಾಕಾರರನ್ನು ತಡೆ ಹಿಡಿದರು. ಈ ವೇಳೆ ಪೊಲೀಸರು ಮತ್ತು ಕೈ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.

ಇಡಿ ಕಚೇರಿ ಎದುರು ಕಾಂಗ್ರೆಸ್​ ಪ್ರತಿಭಟನೆಈ ವೇಳೆ ಬ್ಯಾರಿಕೇಡ್ ಹತ್ತಿ ಕೈ ನಾಯಕರು ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಪ್ರಿಯಾಂಕ್ ಖರ್ಗೆ, ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹ್ಯಾರಿಸ್​​ ಬ್ಯಾರಿಕೇಡ್ ಹತ್ತಿ ಆಕ್ರೋಶ ಹೊರಹಾಕಿದರು. ಪೊಲೀಸರು ಕೈ ನಾಯಕರು, ಕಾರ್ಯಕರ್ತರಿಗೆ ತಡೆ ಒಡ್ಡಿದರು. ಮುತ್ತಿಗೆ ಹಾಕಲು ಯತ್ನಿಸಿದ ಕೈ ನಾಯಕರು ಹಾಗೂ ಕೆಲ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್, ರಾಮಲಿಂಗೇಗೌಡ, ಪ್ರಿಯಾಂಕ್ ಖರ್ಗೆ ಸೇರಿ ಕೈ ನಾಯಕರನ್ನು ವಶಕ್ಕೆ ಪಡೆಯಲಾಯಿತು.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ