Breaking News

ರಾತ್ರಿಯಿಂದ ಜಿಲ್ಲೆಯಲ್ಲಿ 144ಸೆಕ್ಷನ್ ಜಾರಿ

Spread the love

ಬೆಳಗಾವಿ: ವಿಧಾನ ಪರಿಷತ್ತಿನ ಪದವೀಧರರ ಹಾಗೂ ಶಿಕ್ಷಕಕರ ಮತಕ್ಷೇತ್ರಗಳ ಮತದಾನ ಪ್ರಕ್ರಿಯೆ ಮುಗಿದಿರುವ ಹಿನ್ನೆಲೆ ಜೂನ್ 15 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಹೀಗಾಗಿ ಶಾಂತಿಯುತ, ಸುವ್ಯವಸ್ಥಿತ ಮತ ಎಣಿಕೆ ಪ್ರಕ್ರಿಯೆ ಕಾರಣಕ್ಕಾಗಿ ಜೂನ್ 14ರ ಮಧ್ಯರಾತ್ರಿ 12 ಗಂಟೆಯಿಂದ ಜೂನ್ 15ರ ಮಧ್ಯರಾತ್ರಿ 12 ಗಂಟೆಯವರೆಗೆ ಮತ ಎಣಿಕಾ ಕೇಂದ್ರ ಜ್ಯೋತಿ ಪದವಿ ಪೂರ್ವ ಕಾಲೇಜಿನ 200 ಮೀಟರ್ ವ್ಯಾಪ್ತಿಯಲ್ಲಿ ಕಲಂ 144 ಜಾರಿಗೊಳಿಸಲಾಗಿದೆ.

ನಿಷೇಧಾಜ್ಞೆ ಜಾರಿ ಹಿನ್ನಲೆ ನಗರದಲ್ಲಿ ಅಂತ್ಯಕ್ರಿಯೆ ಮೆರವಣಿಗೆ, ಅನುಮತಿ ಪಡೆದ ಮೆರವಣಿಗೆಗಳನ್ನು ಹೊರತು ಪಡಿಸಿ ಯಾವುದೇ ರೀತಿಯಲ್ಲಿ ಜಾತ್ರೆ, ಮೆರವಣಿಗೆ, ಸಭೆ, ಸಮಾರಂಭಗಳನ್ನು ನಡೆಸುವುದಕ್ಕೆ ಅವಕಾಶ ನೀಡಿಲ್ಲ.

ಮಾರಕ, ಸ್ಫೋಟಕ ವಸ್ತುಗಳನ್ನು ಹೊತ್ತೊಯ್ಯುವುದು ಸಿಡಿಮದ್ದುಗಳನ್ನು ಸಿಡಿಸುವುದನ್ನೂ ನಿಷೇಧಿಸಲಾಗಿದೆ. ನಿಯಮ ಮೀರಿದವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಲಾಗುತ್ತದೆ ಎಂದು ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಮತ್ತು ಪೊಲೀಸ್ ಆಯುಕ್ತರಾದ ಡಾ. ಬೋರಲಿಂಗಯ್ಯ ಎಂ.ಬಿ. ತಿಳಿಸಿದ್ದಾರೆ


Spread the love

About Laxminews 24x7

Check Also

ನಾರಾಯಣ ಬರಮನಿ ಬೆಳಗಾವಿಯ ನೂತನ ಡಿಸಿಪಿ ಬೆಳಗಾವಿಯಲ್ಲಿ ಸಿಂಗಮ್ 3 ಅಧ್ಯಾಯ ಆರಂಭ…

Spread the love ನಾರಾಯಣ ಬರಮನಿ ಬೆಳಗಾವಿಯ ನೂತನ ಡಿಸಿಪಿ ಬೆಳಗಾವಿಯಲ್ಲಿ ಸಿಂಗಮ್ 3 ಅಧ್ಯಾಯ ಆರಂಭ… ಬೆಳಗಾವಿಯ ಡಿಸಿಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ