Breaking News

ಬೆಡ್‌ಶೀಟ್‌ನಲ್ಲಿ ಆನೆ ದಂತ ಸಾಗಾಟ, ಮೂವರು ಅರೆಸ್ಟ್‌, ಓರ್ವ ಪರಾರಿ

Spread the love

ಚಾಮರಾಜನಗರ: ಕಾರಿನಲ್ಲಿ ಆನೆ ದಂತ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಂಚಾರಿ ಅರಣ್ಯ ದಳದ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮಗಳೂರು ಮೂಲದ ಪ್ರೀತಮ್(31), ಜಗದೀಶ್(21), ಪುನೀತ್(28) ಬಂಧನಕ್ಕೆ ಒಳಗಾದರೆ ಹೇಮಂತ್ ಪರಾರಿಯಾಗಿದ್ದಾನೆ. 

ಬೆಡ್ ಶಿಟ್‌ನಲ್ಲಿ ಆನೆ ದಂತ ಸುತ್ತಿಕೊಂಡು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ಕಾರನ್ನು ಅಡ್ಡ ಹಾಕಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ ಆನೆ ದಂತ, ಕಾರು, ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಸರ್ಕಾರಿ ವೈದ್ಯರು, ನರ್ಸ್​ಗಳಿಗೆ ಗ್ರಾಮೀಣ ಸೇವೆ ಕಡ್ಡಾಯ

Spread the loveಬೆಂಗಳೂರು: ನಗರ ಪ್ರದೇಶಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್​ಗಳು ಸೇರಿದಂತೆ ಇತರ ಸಿಬ್ಬಂದಿ ಇನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ