Breaking News

ವಿಧಾನ ಪರಿಷತ್ ನ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ: ಮತ ಎಣಿಕೆ ಆರಂಭ

Spread the love

ಬೆಂಗಳೂರು: ಮೊನ್ನೆ ಜೂನ್ 13ರಂದು ವಿಧಾನ ಪರಿಷತ್ ನ ವಾಯವ್ಯ ಮತ್ತು ದಕ್ಷಿಣ ಪದವೀಧರರ ಕ್ಷೇತ್ರಗಳು, ವಾಯವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ಬುಧವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ.

ಮತ ಎಣಿಕೆ ಕೇಂದ್ರಗಳಲ್ಲಿ ಬಿಗುವಿನ ವಾತಾವರಣವಿದ್ದು ಚುನಾವಣಾ ಆಯೋಗ ಭದ್ರತೆ ಕಲ್ಪಿಸಿದೆ.

ಎಲ್ಲಾ ಮತದಾನ ಕೇಂದ್ರಗಳಲ್ಲಿ ಮತದಾನ ಆರಂಭಗೊಂಡಿದ್ದು, 607 ಮತಗಟ್ಟೆಗಳಲ್ಲಿ 2,84,922 ಶಿಕ್ಷಕರು ಮತ್ತು ಪದವೀಧರರು ತಮ್ಮ ಹಕ್ಕು ಚಲಾಯಿಸಿದ್ದರು. ಚುನಾವಣಾ ಕಣದಲ್ಲಿ ನಾಲ್ವರು ಮಹಿಳೆಯರು ಸೇರಿದಂತೆ 49 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ. ವಾಯುವ್ಯ ಪದವೀಧರ ಕ್ಷೇತ್ರವೊಂದರಲ್ಲಿ ಮಾತ್ರ ಜೆಡಿಎಸ್ ಸ್ಪರ್ಧೆ ಮಾಡಿಲ್ಲ.

ಜುಲೈ ನಾಲ್ಕರಂದು ಬಿಜೆಪಿಯ ಹಣಮಂತ ನಿರಾಣಿ, ಜೆಡಿಎಸ್‌ನ ಕೆ.ಟಿ.ಶ್ರೀಕಂಠೇಗೌಡ, ಬಿಜೆಪಿಯ ಅರುಣ್ ಶಹಾಪುರ ಮತ್ತು ಮತ್ತು ಜೆಡಿಎಸ್‌ ನ ಬಸವರಾಜ ಹೊರಟ್ಟಿ ಅವರ ಅವಧಿ ಅಂತ್ಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಚುನಾವಣೆ ನಡೆದಿತ್ತು. ವಿಧಾನ ಪರಿಷತ್ ನಲ್ಲಿ ಬಹುಮತ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಆಡಳಿತರೂಢ ಬಿಜೆಪಿ ಸರ್ಕಾರಕ್ಕೆ ಈ ಚುನಾವಣೆ ಮಹತ್ವದಾಗಿದೆ. ಬಸವರಾಜ್ ಹೊರಟ್ಟಿ ಈ ಬಾರಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದಾರೆ.


Spread the love

About Laxminews 24x7

Check Also

ಮೇಶ್ ಜಾರಕಿಹೊಳಿ ವಿರುದ್ಧ ಸುಳ್ಳು ಸುದ್ದಿ: ₹20 ಕೋಟಿ ಮಾನನಷ್ಟ ಕೇಸ್‌

Spread the loveಬೆಳಗಾವಿ: ಅಸ್ತಿತ್ವದಲ್ಲಿ ಇಲ್ಲದ ಖಾಸಗಿ ಮಾಧ್ಯಮದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರ ಆರೋಗ್ಯದ ಬಗ್ಗೆ ಇಲ್ಲಸಲ್ಲದ ಸುದ್ದಿಯನ್ನು ಅಪಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ