ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಲೋಕಾಯುಕ್ತ ಬಿ.ಎಸ್. ಪಾಟೀಲ್
ಬೆಂಗಳೂರು: ಲೋಕಾಯುಕ್ತರಾಗಿ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದ್ದು, ನೂತನ ಲೋಕಾಯುಕ್ತರಿಗೆ ರಾಜ್ಯಪಾಲ ಥಾವತ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ. ನ್ಯಾ.ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಕನ್ನಡ ಭಾಷೆಯಲ್ಲಿ, ಭಗವಂತ ಮತ್ತು ಸತ್ಯ-ನಿಷ್ಠೆಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ಗಮನಾರ್ಹವಾಗಿತ್ತು.
Laxmi News 24×7