Breaking News

ಸಿಎಂ ಬೊಮ್ಮಾಯಿ ಸಿನಿಮಾ ನೋಡಿ ಕಣ್ಣೀರು ಹಾಕಿದರೆ, ಜನ ಅವರ ಸರಕಾರ ನೋಡಿ ಕಣ್ಣೀರಿಡುತ್ತಿದ್ದಾರೆ

Spread the love

ಮೊನ್ನೆಯಷ್ಟೇ ರಕ್ಷಿತ್ ಶೆಟ್ಟಿ ನಟನೆಯ ‘ಚಾರ್ಲಿ 777’ ಸಿನಿಮಾ ನೋಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಧ್ಯಮಗಳ ಮುಂದೆ ಭಾವುಕರಾಗಿ ಆ ಸಿನಿಮಾದ ಬಗ್ಗೆ ಮಾತನಾಡಿದ್ದರು. ಕೆಲ ತಿಂಗಳ ಹಿಂದೆ ನಿಧನ ಹೊಂದಿದ್ದ ತಮ್ಮ ಮನೆಯ ನಾಯಿಯನ್ನು ನೆನಪಿಸಿಕೊಂಡಿದ್ದರು. ಚಾರ್ಲಿ ಸಿನಿಮಾ ನೋಡಿ ಅತ್ತ ಬೊಮ್ಮಾಯಿ ಅವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಕುರಿತು ನಟ, ಸಾಮಾಜಿಕ ಹೋರಾಟಗಾರ ಚೇತನ್ ವ್ಯಂಗ್ಯವಾಡಿದ್ದಾರೆ.

ಸಿಎಂ ಬೊಮ್ಮಾಯಿ ಅವರು ಕಣ್ಣೀರಿಟ್ಟ ವಿಡಿಯೋ ನೋಡಿರುವ ಚೇತನ್, ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ “ಕನ್ನಡ ಚಿತ್ರವೊಂದನ್ನು ತೆರೆ ಮೇಲೆ ನೋಡಿ ಸಿಎಂ ಬೊಮ್ಮಾಯಿ ಅವರು ಕಣ್ಣೀರು ಹಾಕಿದರೆ, ಬೊಮ್ಮಾಯಿ ಅವರ ಆಡಳಿತವನ್ನು ನೋಡಿ ಕರ್ನಾಟಕದ ಜನತೆ ಕಣ್ಣೀರು ಹಾಕುತ್ತಿದ್ದಾರೆ’ ಎಂದು ಬರೆದು ವ್ಯಂಗ್ಯವಾಡಿದ್ದಾರೆ.

ಈ ಪೋಸ್ಟ್ ಹಾಕಿದ ಚೇತನ್ ಗೆ ಕೆಲವರು ತರಾಟೆಗೆ ತಗೆದುಕೊಂಡಿದ್ದರೆ, ಇನ್ನೂ ಕೆಲವರು ಮೆಚ್ಚುಗೆ ಸೂಚಿಸಿದ್ದಾರೆ. 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ