Breaking News

ಕಾಂಗ್ರೆಸ್‌ನಿಂದ ಇಂದು ರಾಜಭವನ ಮುತ್ತಿಗೆ

Spread the love

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರನ್ನು ನಿರಂತರವಾಗಿ ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಕ್ರಮ ದ್ವೇಷದ ರಾಜಕೀಯ ಎಂದು ಆರೋಪಿಸಿರುವ ಕಾಂಗ್ರೆಸ್‌, ಅದನ್ನು ವಿರೋಧಿಸಿ ಗುರುವಾರ ರಾಜಭವನಕ್ಕೆ ಮುತ್ತಿಗೆ ಹಾಕುವುದಾಗಿ ಪ್ರಕಟಿಸಿದೆ.

 

ಬುಧವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರದ ಬಿಜೆಪಿ ಸರ್ಕಾರವು ಸಾಂವಿಧಾನಿಕ ಸಂಸ್ಥೆಗಳು ಮತ್ತು ತನಿಖಾ ಸಂಸ್ಥೆಗಳನ್ನು ದ್ವೇಷದ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ. ಇದನ್ನು ವಿರೋಧಿಸಿ ಗುರುವಾರ ಬೆಳಿಗ್ಗೆ 10 ಗಂಟೆಗೆ ಕೆಪಿಸಿಸಿ ಕಚೇರಿಯಿಂದ ಮೆರವಣಿಗೆಯಲ್ಲಿ ತೆರಳಿ ರಾಜಭವನಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದರು.


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ