ವಿಜಯನಗರ(ಬಳ್ಳಾರಿ): ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗ್ತಿದ್ದವರ ಮೇಲೆ ಪೊಲೀಸರು ದರ್ಪ ತೋರಿದ ಘಟನೆಯೊಂದು ವಿಜಯನಗರದ ಹೊಸಪೇಟೆಯಲ್ಲಿ ನಡೆದಿದೆ.
ಹೊಸಪೇಟೆಯ ಮೂರಂಗಡಿ ವೃತ್ತದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಕಾರಿಗೆ ಫೈನ್ ಹಾಕುವ ವಿಚಾರದಲ್ಲಿ ಗಲಾಟೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಪಟ್ಟಣ ಸೆರಗು ಗ್ರಾಮದಿಂದ ಕುಂಟುಂಬ ಮದುವೆ ಕಾರ್ಯಕ್ರಮಕ್ಕೆಂದು ಬಂದಿತ್ತು. ಈ ವೇಳೆ ಮಗುವಿನ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗುತ್ತಿತ್ತು. ಈ ವೇಳೆ ಕಾರು ತಡೆದ ಪೊಲೀಸರು ದುರ್ವರ್ತನೆ ತೋರಿದ್ದಾರೆ.
ಪೋಷಕರು ತಮ್ಮ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಪೊಲೀಸರು ಕಾರು ತಡೆದಿದ್ದಾರೆ. ಈ ವೇಳೆ ಪಾಪುಗೆ ಹುಷಾರಿಲ್ಲ, ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದೇವೆ ಎಂದು ಪೋಷಕರು ಪರಿಪರಿಯಾಗಿ ಬೇಡಿಕೊಂಡರೂ ಪೊಲೀಸರು ಕ್ಯಾರೇ ಎಂದಿಲ್ಲ.