Home / ರಾಜಕೀಯ / ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಒಟ್ಟು ಏಳು ಸದಸ್ಯರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಒಟ್ಟು ಏಳು ಸದಸ್ಯರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

Spread the love

ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಒಟ್ಟು ಏಳು ಸದಸ್ಯರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಹೌದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜೆಡಿಎಸ್ ಸದಸ್ಯ ಟಿ.ಎ ಶರವಣ, ಬಿಜೆಪಿ ಸದಸ್ಯರಾದ ಲಕ್ಷಣ ಸವದಿ, ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್, ಹೇಮಲತಾ, ಕಾಂಗ್ರೆಸ್‍ನ ಸದಸ್ಯರಾದ ನಾಗರಾಜ್, ಅಬ್ದುಲ್ ಜಬ್ಬಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‍ನ ಹಂಗಾಮಿ ಸಭಾಪತಿ ರಘುನಾಥ್‍ರಾವ್ ಮಲ್ಕಾಪುರೆ, ವಿಧಾನಸಭೆ ಉಪಾಧ್ಯಕ್ಷ ಆನಂದ್ ಮಾಮನಿ, ಸಚಿವರಾದ ಆರ್.ಅಶೋಕ್, ಕೋಟಾ ಶ್ರೀನಿವಾಸ ಪೂಜಾರಿ, ಮೇಲ್ಮನೆ ಆಡಳಿತ ಪಕ್ಷದ ಸಚೇತಕ ವೈ.ಎ.ನಾರಾಯಣಸ್ವಾಮಿ, ವಿರೋಧ ಪಕ್ಷದ ಸಚೇತಕ ಪ್ರಕಾಶ್ ರಾಥೋಡ್ ಶಾಸಕರಾದ ಎನ್.ಎ.ಹ್ಯಾರಿಸ್ ಉಪಸ್ಥಿತರಿದ್ದರು.

 

ಅಬ್ದುಲ್ ಜಬ್ಬಾರ್, ಅಲ್ಲಾಹ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಭಗವಂತನ ಹೆಸರಿನಲ್ಲಿ ನಾಗರಾಜ್ ಯಾದವ್ ಪ್ರಮಾಣ ವಚನ ಸ್ವೀಕರಿಸಿದ್ರು. ಬಾಬಾಸಾಹೇಬ್ ಅಂಬೇಡ್ಕರ್ ಹೆಸರಿನಲ್ಲಿ ಛಲವಾದಿ ನಾರಾಯಣಸ್ವಾಮಿ ಪ್ರಮಾಣವಚನ ಸ್ವೀಕರಿಸಿದ್ರೆ, ವಾಲ್ಮೀಕಿ ಹೆಸರಿನಲ್ಲಿ ಹೇಮಲತಾ ನಾಯಕ್ ಪ್ರಮಾಣವಚನ ಸ್ವೀಕರಿಸಿದ್ರು. ಹಾಗೂ ಭಗವಂತನ ಹೆಸರಿನಲ್ಲಿ ಲಕ್ಷ್ಮಣ ಸವದಿ ಪ್ರಮಾಣವಚನ ಸ್ವೀಕರಿಸಿದ್ದಾರೆ


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ