Breaking News

ಬೆಳಗಾವಿ ವಕೀಲರ ಹೋರಾಟಕ್ಕೆ ಮಣಿದ ಸರ್ಕಾರ: ರಾಜ್ಯ ಗ್ರಾಹಕರ ಆಯೋಗ ಪೀಠ ಸ್ಥಾಪನೆಗೆ ಆದೇಶ

Spread the love

ಕರ್ನಾಟಕ ರಾಜ್ಯ ಗ್ರಾಹಕರ ಆಯೋಗದ ಪೀಠವನ್ನು ಬೆಳಗಾವಿಯಲ್ಲಿ ಶೀಘ್ರವೇ ಪ್ರಾರಂಭಿಸುವಂತೆ ಆಗ್ರಹಿಸಿ ಬೆಳಗಾವಿಯ ನ್ಯಾಯವಾದಿಗಳು ನಡೆಸಿದ ಉಪವಾಸ ಸತ್ಯಾಗ್ರಹಕ್ಕೆ ಕೊನೆಗೂ ರಾಜ್ಯ ಸರ್ಕಾರ ಮಣಿದಿದೆ. ಬೆಳಗಾವಿಯಲ್ಲಿ ಪೀಠ ಆರಂಭಿಸಲು ಆದೇಶ ಹೊರಡಿಸಿದೆ.

ಹೌದು ಬೆಳಗಾವಿಯಲ್ಲಿ ರಾಜ್ಯ ಗ್ರಾಹಕರ ಆಯೋಗದ ಪೀಠವನ್ನು ಆರಂಭಿಸುವಂತೆ ಆಗ್ರಹಿಸಿ ಬೆಳಗಾವಿಯ ನ್ಯಾಯವಾದಿಗಳು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದರು. ನಮ್ಮ ಬೇಡಿಕೆ ಈಡೇರುವವರೆಗೂ ಯಾವುದೇ ಕಾರಣಕ್ಕೂ ಪ್ರತಿಭಟನೆ ವಾಪಸ್ಸು ಪಡೆಯೋದಿಲ್ಲ ಎಂದು ಪಟ್ಟು ಹಿಡಿದಿದ್ದರು. ಇದರಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಬೆಳಗಾವಿಯಲ್ಲಿ ಪೀಠ ಸ್ಥಾಪನೆಗೆ ಆದೇಶ ಹೊರಡಿಸಿದೆ. ಈ ಸಂಬಂಧ ಸ್ಥಳಕ್ಕೆ ಆಗಮಿಸಿದ ನಗರ ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ ಪ್ರತಿಭಟನಾ ನಿರತ ನ್ಯಾಯವಾದಿಗಳಿಗೆ ಎಳನೀರು ಕುಡಿಸುವ ಮೂಲಕ ಪ್ರತಿಭಟನೆ ವಾಪಸ್ಸು ಪಡೆದುಕೊಳ್ಳುವಂತೆ ಮಾಡಿದರು.ಒಟ್ಟಾರೆ ಬೆಳಗಾವಿಯ ವಕೀಲರ ಹೋರಾಟಕ್ಕೆ ನ್ಯಾಯ ಸಿಕ್ಕಿದ್ದು. ಇನ್ಮುಂದೆ ಬೆಳಗಾವಿಯಲ್ಲಿ ರಾಜ್ಯ ಗ್ರಾಹಕರ ಆಯೋಗ ಪೀಠ ಕಾರ್ಯಾರಂಭ ಮಾಡಲಿದೆ.


Spread the love

About Laxminews 24x7

Check Also

ಗಡಿ ಗ್ರಾಮಗಳಲ್ಲಿ ಜಲ ಸಮಸ್ಯೆ

Spread the loveಸಂಬರಗಿ: ಶಿರೂರು, ಪಾಂಡೇಗಾಂವ್, ಜಂಬಗಿ, ಸಂಬರಗಿ, ಜಕಾರಟಿ ಸೇರಿದಂತೆ ಗಡಿಭಾಗದ ಬಹುತೇಕ ಗ್ರಾಮಗಳಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ