Breaking News

ಇದೇ ಜೂನ್ 30 ರಂದು ನಿವೃತ್ತಿಯಾಗಬೇಕಿದ್ದ ಲೋಕೋಪಯೋಗಿ ಅಧೀಕ್ಷಕರ ಮನೆ ಹಾಗೂ ಕಚೇರಿಯ ಮೇಲೆ ಎಸಿಬಿ ಅಧಿಕಾರಿಗಳ ದಾಳಿ

Spread the love

ಇದೇ ಜೂನ್ 30 ರಂದು ನಿವೃತ್ತಿಯಾಗಬೇಕಿದ್ದ ಲೋಕೋಪಯೋಗಿ ಅಧೀಕ್ಷಕರ ಮನೆ ಹಾಗೂ ಕಚೇರಿಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ ಘಟನೆ ಬೆಳಗಾವಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ನಡೆದಿದೆ.

ಇಂದು ಬೆಳ್ಳಂಬೆಳಿಗ್ಗೆ ಬೆಳಗಾವಿಯ ಲೋಕೋಪಯೋಗಿ ಅಧೀಕ್ಷಕರಾದ ಬಿ.ವೈ ಪವಾರ್ ರವರ ಮನೆ ಹಾಗೂ ಕಚೇರಿಯ ಮೇಲೆ ಎಸಿಬಿ ಅಧಿಕಾರಿಳು ದಾಳಿ ನಡೆಸಿದ್ದಾರೆ. ಬೆಳ್ಳಂ ಬೆಳಿಗ್ಗೆ 25ಕ್ಕೂ ಹೆಚ್ಚು ಸಿಬ್ಬಂದಿಯುಳ್ಳ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ವೃತ್ತಿ ಅಂಚಿನಲ್ಲಿದ್ದ ಹಿರಿಯ ಅಧಿಕಾರಿ ಬಿ.ವೈ ಪವಾರ್ ರವರ ಮನೆ ಮೇಲೆ ದಾಳಿ ಮಾಡಿದ ಎಸಿಬಿ ಅಧಿಕಾರಿಗಳು ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಳಗಾವಿಯ ಜಕ್ಕೇರಿ ಹೊಂಡದಲ್ಲಿರುವ ಪವಾರ್ ಮನೆ, ಕಚೇರಿ ಹಾಗೂ ಸರ್ಕಾರಿ ನಿವಾಸದ ಮೇಲೂ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಇದೇವೇಳೆ ನಿಪ್ಪಾಣಿ ಮನೆ, ಬೋರಗಾಂವಿನಲ್ಲಿರುವ ಕಾರ್ಖಾನೆ ಸೇರಿದಂತೆ ಒಟ್ಟು 6ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ.
ಇನ್ನು ಬಿ.ವೈ. ಪವಾರ್ ಜೂನ್ 30 ರಂದು ಸೇವಾ ನಿವೃತ್ತಿ ಹೊಂದಲಿದ್ದರು. ಆದರೆ ಇಂದು ಬೆಳಿಗ್ಗೆ ಎಸಿಬಿ ಅಧಿಕಾರಿಗಳು ಅವರಿಗೆ ಶಾಕ್ ನೀಡಿದ್ದಾರೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ