Breaking News

ಖಾನಾಪೂರ ತಾಲೂಕಿನ ಮದುವೆಯಾದ ಏಳೇ ದಿನಕ್ಕೆ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ

Spread the love

ಬೆಳಗಾವಿ: ಮದುವೆಯಾದ ಏಳೇ ದಿನಕ್ಕೆ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಖಾನಾಪೂರ ತಾಲೂಕಿನ ಲಕ್ಕೇಬೈಲ್ ಗ್ರಾಮದಲ್ಲಿ ನಡೆದಿದೆ.

ಖಾನಾಪೂರ ತಾಲೂಕಿನ ಲಕ್ಕೇಬೈಲ್ ಗ್ರಾಮದ ದೇಮಪ್ಪ ಅರ್ಜುನ್ ಸನದಿ (23) ಮೃತ ಯುವಕ. ಮೃತ ದೇಮಪ್ಪ ಕಳೆದ ವಾರವಷ್ಟೇ ತನ್ನ ಸೋದರತ್ತೆಯ ಮಗಳನ್ನು ಮದುವೆಯಾಗಿದ್ದನು‌. ತನ್ನ ಸಂಬಂಧಿಕರ ಮನೆಗೆ ಹೋಗಿ ರಾತ್ರಿ ಮನೆಗೆ ಮರಳಿದ್ದ ಬಳಿಕ ಮಧ್ಯರಾತ್ರಿ ಮಲಗುವ ಕೊಠಡಿಯಲ್ಲಿ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾನೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಖಾನಾಪುರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ದೇಮಪ್ಪನ ಪತ್ನಿ ಹಾಗೂ ಆಕೆಯ ಪಾಲಕರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.


Spread the love

About Laxminews 24x7

Check Also

ಮನೆಗಳ ಕರ ಸುಲಾತಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಕಾಗವಾಡ ತಾಲೂಕ ಪ್ರಥಮ ಸ್ಥಾನ.

Spread the loveಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 15 ತಾಲೂಕಿನ ತಾಲೂಕಾ ಪಂಚಾಯಿತಿಗಳ ಪೈಕಿ ಕಾಗವಾಡ ತಾಲೂಕ ಪಂಚಾಯಿತಿ ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ