Breaking News

ವರ್ಷಾಂತ್ಯಕ್ಕೆ ಪ್ರತಿ ಜಿಲ್ಲೆಯಲ್ಲಿ ಗೋಶಾಲೆ: ಹೈಕೋರ್ಟ್‌ಗೆ ಸರ್ಕಾರ

Spread the love

ಬೆಂಗಳೂರು: ಈ ವರ್ಷದ ಡಿಸೆಂಬರ್ ವೇಳೆಗೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ಪ್ರಾರಂಭಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ.

ಈ ಸಂಬಂಧ ಹೈಕೋರ್ಟ್ ಕಾನೂನು ಸೇವೆಗಳ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

 

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ಪ್ರಮಾಣ ಪತ್ರ ಸಲ್ಲಿಸಿ, ‘ಹೆಚ್ಚುವರಿಯಾಗಿ 70 ಗೋಶಾಲೆಗಳನ್ನು ತೆರೆಯಲು ಸರ್ಕಾರ ತೀರ್ಮಾನಿಸಿದೆ’ ಎಂದು ವಿವರಿಸಿ, ಯಾವ ತಿಂಗಳಲ್ಲಿ, ಯಾವ ಜಿಲ್ಲೆಯಲ್ಲಿ ಗೋಶಾಲೆ ಕಾರ್ಯಾರಂಭ ಮಾಡಲಿವೆ ಎಂಬ ವೇಳಾಪಟ್ಟಿಯನ್ನು ಸಲ್ಲಿಸಿದರು.

‘ಹೊಸ 70 ಗೋಶಾಲೆಗಳ ನಿರ್ಮಾಣಕ್ಕೆ ₹ 20 ಕೋಟಿ, ಕಾಮಗಾರಿ ಚಾಲ್ತಿಯಲ್ಲಿರುವ ಗೋಶಾಲೆಗಳಿಗೆ ₹ 15 ಕೋಟಿ ಸೇರಿದಂತೆ ಗೋಶಾಲೆಗಳ ಸ್ಥಾಪನೆಗೆ ಒಟ್ಟು ₹ 50 ಕೋಟಿ ಅನುದಾನ ಮೀಸಲಿಡಲಾಗಿದೆ’ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ