ಬೆಂಗಳೂರು: ಇಂದು ನಗರದಲ್ಲಿ ಪಠ್ಯಪುಸ್ತಕ ಕುರಿತು ಬೃಹತ್ ಪ್ರತಿಭಟನೆಯೇ ನಡೆಯುತ್ತಿದೆ. ರಾಜ್ಯದ ಮೂಲೆಮೂಲೆಯಿಂದಲೂ ಸಾಕಷ್ಟು ಜನ ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡ ಜೊತೆಯಾಗಿದ್ದು, ಪಠ್ಯ ಪುಸ್ತಕ ಮಾಡಿದವರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಷ್ಕರಣೆಗೊಂಡಿರುವ ಪುಸ್ತಕವನ್ನು ವೇದಿಕೆಯ ಮೇಲೆಯೇ ಹರಿದು ಹಾಕಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ನಾನು ಇದನ್ನು ಸುಟ್ಟು ಹಾಕಬೇಕು ಎಂದು ಬಂದೆ. ಆದರೆ ವೇದಿಕೆ ಮೇಲೆ ಸುಡಲು ಆಗಲ್ಲ. ಹಾಗಾಗಿ ಹರಿದು ಹಾಕುತ್ತಿದ್ದೇನೆ ಎಂದಿದ್ದಾರೆ.
ನಾವು ವಿಧಾನಸಭೆಯಲ್ಲಿ ಮಾತಾಡಬೇಕು. ಆದರೆ ಸಮಯ ಬಂದಿಲ್ಲ. ಈ ಹೋರಾಟದ ಜೊತೆ ನಾವು ಇದ್ದೇವೆ ಎಂದು ಹೇಳಲು ಬಂದಿದ್ದೇನೆ. ದೇಶಕ್ಕೆ ಸ್ವಾತಂತ್ರ್ಯ ಹೋರಾಟ ತಂದುಕೊಟ್ಟ ಪಕ್ಷದ ಪ್ರತಿನಿಧಿಯಾಗಿ ಬಂದಿದ್ದೇನೆ. ಪಠ್ಯಪುಸ್ತಕ ಪರಿಷ್ಕರಣೆ ವಾಪಸ್ ಪಡೆಯುವವರೆಗೂ ಹೋರಾಟ ಮಾಡ್ತೇವೆ. ಯಾರ್ಯಾರು ಈ ಹೋರಾಟ ಬುನಾದಿ ಹಾಕಿದ್ದೀರಿ ಅವರಿಗೆಲ್ಲಾ ಸಾಷ್ಟಾಂಗ ನಮಸ್ಕಾರ.