ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಪಡಿತರ ಚೀಟಿ ಹೊಂದಿರುವ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಟುಂಬಗಳಿಗೆ ಗೃಹ ಬಳಕೆದಾರರಿಗೆ ಮಾಸಿಕ 75 ಯೂನಿಟ್‍ಗಳವರೆಗೆ ಉಚಿತ ವಿದ್ಯುತ್ ಒದಗಿಸಲಾಗುತ್ತದೆ ಎಂದು ಬಳ್ಳಾರಿ ನಗರ ಜೆಸ್ಕಾಂ, ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರ (ಬಿಪಿಎಲ್ ಪಡಿತರ ಚೀಟಿ ಪಡೆದಿರುವಂತಹ) ಗ್ರಾಹಕರು ಪ್ರಸ್ತುತ ಇರುವ ವಿದ್ಯುತ್ ಬಾಕಿಯನ್ನು ಪಾವತಿಸಿದ್ದಲ್ಲಿ ಮಾತ್ರ ಸರಕಾರದ ಆದೇಶದ ಪ್ರಕಾರ 75 ಯೂನಿಟ್ ವಿದ್ಯುತ್‍ನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.