Breaking News

ಪ್ರಮೋದ್ ಮುತಾಲಿಕ್​-ಯಶಪಾಲ್ ಸುವರ್ಣರ ತಲೆ ಕಡಿಯಲು ಕರೆ ನೀಡಿದ್ದವನ ಬಂಧನ.

Spread the love

ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್​ ಹಾಗೂ ಬಿಜೆಪಿ ಮುಖಂಡ ಯಶಪಾಲ್ ಸುವರ್ಣ ಅವರ ತಲೆ ಕಡಿದರೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಕರೆ ನೀಡಿದ್ದವನನ್ನು ಪೊಲೀಸರು ಹೆಡೆಮುರಿಕಟ್ಟಿ ಬಂಧಿಸಿದ್ದಾರೆ.

ಮಹಮ್ಮದ್ ಶಫಿ ಬಂಧಿತ ಆರೋಪಿ.

ಈತ ಮಾರಿಗುಡಿ ಎಂಬ ಇನ್​ಸ್ಟಾಗ್ರಾಂ ಖಾತೆ ಮೂಲಕ ಇಂಥದ್ದೊಂದು ಪ್ರಚೋದಕ ಹೇಳಿಕೆ ನೀಡಿದ್ದ. ‘ಈ ಎರಡು ತಲೆ ಕಡಿದರೆ 20 ಲಕ್ಷ..! ಒಂದು ತಲೆಗೆ 10 ಲಕ್ಷ, ಇನ್ನೊಂದು ತಲೆಗೆ 10 ಲಕ್ಷ. ಕೂಡಲೇ ನಿಮ್ಮ ಖಾತೆಗೆ ಜಮಾ ಆಗುತ್ತದೆʼ ಹೀಗಂತ ಬರೆದುಕೊಂಡಿದ್ದಲ್ಲದೆ, 100% ಈ ಎರಡು ತಲೆ ಉರುಳೋದು ಖಚಿತ ಎಂದು ಪೋಸ್ಟ್ ಮಾಡಲಾಗಿತ್ತು.

ಐಪಿ ವಿಳಾಸದ ಮೂಲಕ ಮಂಗಳೂರಿನ ಸುರತ್ಕಲ್​ನಲ್ಲಿ ಆರೋಪಿಯನ್ನು ಬಂಧಿಸಿರುವ ಕಾಪು ಪೊಲೀಸರು ಈತನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಂಗಳೂರಿನ ಬಜ್ಪೆ ನಿವಾಸಿಯಾಗಿರುವ ಈತ ಸುರತ್ಕಲ್ ಭಾಗದಲ್ಲಿ ಲಾಜಿಸ್ಟಿಕ್​ನಲ್ಲಿ ಕೆಲಸ ಮಾಡುತ್ತಿದ್ದ. ಲಾರಿಗಳ ಸೂಪರ್​ವೈಸರ್ ಆಗಿರುವ ಮಹಮ್ಮದ್ ಶಫಿ, ಕಾಂಗ್ರೆಸ್​ ಕಾರ್ಯಕರ್ತನಾಗಿಯೂ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ.

ಮಳಲಿ ವಿಚಾರದಲ್ಲಿ ಯಶಪಾಲ್​ ಸುವರ್ಣ ಅವರನ್ನು ಟಾರ್ಗೆಟ್ ಮಾಡಿರುವುದಾಗಿ ಈತ ಒಪ್ಪಿಕೊಂಡಿದ್ದು, ಇವನೊಂದಿಗೆ ಕೈಜೋಡಿಸಿರುವ ಮಹಮ್ಮದ್ ಆಸಿಫ್​ಗಾಗಿ ಪೊಲೀಸರು ಬಲೆಬೀಸಿದ್ದಾರೆ. ಎರಡನೇ ಆರೋಪಿ ಮಹಮ್ಮದ್ ಆಸಿಫ್ ಅಲಿಯಾಸ್ ಆಶಿಕ್ ದುಬೈನಲ್ಲಿ ನೆಲೆಸಿದ್ದಾನೆ. ಮಹಮ್ಮದ್ ಶಫಿ ಬಂಧನದ ಬಳಿಕ ಇನ್​ಸ್ಟಾಗ್ರಾಮ್​ನಲ್ಲಿರುವ ಮಾರಿಗುಡಿ ಅಕೌಂಟ್​​ನಲ್ಲಿರುವ ಎಲ್ಲ ಪೋಸ್ಟ್ ಡಿಲೀಟ್ ಆಗಿದೆ ಎಂದು ಎಎಸ್​ಪಿ ಎಸ್​.ಟಿ. ಸಿದ್ದಲಿಂಗಪ್ಪ ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ