ಕಲಬುರಗಿ: ನಗರದ ಜಾಫರಾಬಾದ್ ಪ್ರದೇಶದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ನಿರ್ಮಿಸಲಾಗಿರುವ ಮನೆಗಳನ್ನು ಇಂದು ಬೆಳಗಿನ ಜಾವ ಜಿಲ್ಲಾಡಳಿತ ಕಾರ್ಯಾಚರಣೆ ಆರಂಭಿಸುವ ಮೂಲಕ ಅಕ್ರಮ ಮನೆಗಳನ್ನು ನೆಲಸಮ ಮಾಡಲಾಗುತ್ತಿದೆ.
ಇಂದು ಬೆಳ್ಳಂಬೆಳಗ್ಗೆ ಪೊಲೀಸ್ ಬಲದೊಂದಿಗೆ ತೆರಳಿದ ಜಿಲ್ಲಾಧಿಕಾರಿ ಯಶ್ವಂತ ಗುರುಕರ್, ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ತಹಶೀಲ್ದಾರ ಪ್ರಕಾಶ ಕುದುರೆ, ಪಾಲಿಕೆ ಅಧಿಕಾರಿಗಳು ಹಾಗೂ ಇತರರು ಸೇರಿಕೊಂಡು ಕಾರ್ಯಾಚರಣೆ ಶುರುವಿಟ್ಟಿದ್ದಾರೆ.
ಬೆಳಗಿನ ಜಾವ ನಾಲ್ಕು ಗಂಟೆಗೆ ಜೆಸಿಬಿ ಮೂಲಕ ಅಕ್ರಮ ಮನೆಗಳನ್ನು ನೆಲಸಮಗೊಳಿಸಲಾಯಿತು.
ಸುಮಾರು 20 ಎಕರೆ ಪ್ರದೇಶವನ್ನು ಕೆಲವರು ಒತ್ತುವರಿ ಮಾಡಿಕೊಂಡು ಮನೆ ಇನ್ನಿತರ ಕಟ್ಟಡ ನಿರ್ಮಿಸಿದ್ದಾರೆ. ಹಲವು ಸಲ ನೋಟೀಸ್ ನೀಡಲಾಗಿದ್ದರೂ ತೆರವು ಮಾಡದ ಹಿನ್ನೆಲೆಯಲ್ಲಿ ಒತ್ತುವರಿ ತೆರವುಗೊಳಿಸಲಾಯಿತು.
Laxmi News 24×7