ಬೆಳಗಾವಿಯ ಮರಾಠ ಮಂಡಳ ಪದವಿ ಮಹಾವಿದ್ಯಾಲಯದ ಎಂಎಸ್ಸಿ ರಸಾಯನ ಶಾಸ್ತ್ರದ ವಿದ್ಯಾರ್ಥಿನಿ ಪಲ್ಲವಿ ಶೇಡಬಾಳ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಮರಾಠ ಮಂಡಳ ಕಲಾ, ವಾಣಿಜ್ಯ, ವಿಜ್ಞಾನ ಮತ್ತು ಗೃಹ ವಿಜ್ಞಾನ ಮಹಾವಿದ್ಯಾಕಯದ ಎಂಎಸ್ಸಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿನಿ ಪಲ್ಲವಿ ಶೇಡಬಾಳ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಎಂಎಸ್ಸಿ ರಸಾಯನ ಶಾಸ್ತ್ರ ವಿಭಾಗದಲ್ಲಿ ಶೇ.79.5ರಷ್ಟು ಅಂಕ ಪಡೆಯುವ ಮೂಲಕ ವಿಶ್ವವಿದ್ಯಾಲಯಕ್ಕೆ ತೃತೀಯ ಸ್ಥಾನ ಪಡೆದಿಕೊಂಡಿದ್ದಾರೆ. ಈ ವಿದ್ಯಾರ್ಥಿನಿಯ ಸಾಧನೆಗೆ ಮರಾಠ ಮಂಡಳ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷೆ ರಾಜಶ್ರೀ ನಾಗರಾಜು ಹಲಗೇಕರ್, ಪ್ರಾಚಾರ್ಯ ಪ್ರೊ.ಜಿ.ವೈ.ಬೆನ್ನಾಳಕರ್, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.
Laxmi News 24×7