ಬೆಂಗಳೂರಿನಲ್ಲಿ ಮೋದಿ ಓಡಾಡುವ ರಸ್ತೆಗಳ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಬೆಂಗಳೂರು ವಿವಿ ಸಂಯೋಜನೆಗೆ ಒಳಪಟ್ಟ ವಿವಿ ವ್ಯಾಪ್ತಿಯ ಒಟ್ಟು 64 ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಕಾರ್ಯಕ್ರಮ ಹಿನ್ನೆಲೆ ಬೆಂಗಳೂರು ವಿಶ್ವವಿದ್ಯಾಲಯಕ್ಕೆ(Bangalore University) ಸ್ಥಳೀಯ ರಜೆ ಘೋಷಣೆ ಮಾಡಿ ಬೆಂಗಳೂರು ವಿವಿ ಸುತ್ತೋಲೆ ಕಳಿಸಿದೆ.
ವಿವಿ ಆವರಣದಲ್ಲಿರುವ ಅಂಬೇಡ್ಕರ್ ಸ್ಕೂಲ್ ಎಕನಾಮಿಕ್ಸ್ ಉದ್ಘಾಟನೆ ಹಿನ್ನೆಲೆ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳಿಗೆ ರಜೆ ನೀಡಿ ಬೆಂಗಳೂರು ವಿವಿ ಕುಲಸಚಿವರು ಸುತ್ತೋಲೆ ಪ್ರಕಟಿಸಿದ್ದಾರೆ.
ಬೆಂಗಳೂರಿನಲ್ಲಿ ಮೋದಿ ಓಡಾಡುವ ರಸ್ತೆಗಳ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಬೆಂಗಳೂರು ವಿವಿ ಸಂಯೋಜನೆಗೆ ಒಳಪಟ್ಟ ವಿವಿ ವ್ಯಾಪ್ತಿಯ ಒಟ್ಟು 64 ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
Laxmi News 24×7