ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಇಂದು ಬೆಂಗಳೂರಿಗೆ ಆಗಮಿಸಿದ್ದು, ಪ್ರಧಾನಿ ಮೋದಿ ಅವರು IISc ನ ಮೆದುಳು ಸಂಶೋಧನಾ ಕೇಂದ್ರ (CBR) ಉದ್ಘಾಟಸಿದ್ದಾರೆ.
ಇಂದು ಬೆಂಗಳೂರಿನ ಯಲಹಂಕ ವಾಯುನೆಲೆಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ IISc ನ ಮೆದುಳು ಸಂಶೋಧನಾ ಕೇಂದ್ರ (CBR) ಉದ್ಘಾಟಸಿದ್ದಾರೆ ಮತ್ತು ಬಾಗ್ಚಿ ಪಾರ್ಥಸಾರಥಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಏರ್ ಬೇಸ್ ಗೆ ಆಗಮಿಸಿದ್ದು, ಪ್ರಧಾನಿ ಮೋದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಬಿಜೆಪಿ ನಾಯಕರು ಸ್ವಾಗತಕೋರಿದ್ದಾರೆ.
Laxmi News 24×7