Breaking News

ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ

Spread the love

ರೈತರು ಹಾಗೂ ಗ್ರಾಮೀಣ ಭಾಗದ ಜನರ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ವಾಸುದೇವ ಮೇಟಿ ಬಣದಿಂದ ನಡೆದ ಪ್ರತಿಭಟನೆಯಲ್ಲಿ ಬೀಜ, ಗೊಬ್ಬರ ಬೆಲೆ ಹೆಚ್ಚಿಗೆ ಮಾಡಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಮಾತನಾಡಿದ ರೈತ ಮುಖಂಡೆ ಶ್ರೀದೇವಿ ನಾಯ್ಕರ್ ಬೀಜ, ಗೊಬ್ಬರ ಬೆಲೆ ಹೆಚ್ಚಿಗೆ ಮಾಡಿದ್ದರಿಂದ ರೈತರಿಗೆ ಸಾಕಷ್ಟು ತೊಂದರೆ ಆಗುತ್ತಿದೆ.ಹೀಗಾಗಿ ತಕ್ಷಣವೇ ಬೀಜ, ಗೊಬ್ಬರ ಬೆಲೆಯನ್ನು ಕಡಿಮೆ ಮಾಡಬೇಕು. ಅದೇ ರೀತಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ, ಸವದತ್ತಿ ಸೇರಿದಂತೆ ಇನ್ನಿತರ ತಾಲೂಕುಗಳ ರೈತರು ಹಾಗೂ ಗ್ರಾಮೀಣ ಭಾಗದ ಜನರ ಸಮಸ್ಯೆಗಳ ಬಗೆಹರಿಸಬೇಕು ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಟೆಸ್ಟ್ ಕ್ರಿಕೆಟ್‌ನಲ್ಲಿ ಅಬ್ಬರಿಸುವ ಸೂಚನೆ ಕೊಟ್ಟ ರಿಷಬ್ ಪಂತ್

Spread the love ಅಪಘಾತದ ಬಳಿಕ ಸುದೀರ್ಘ ವಿಶ್ರಾಂತಿ ಪಡೆದಿದ್ದ ರಿಷಬ್ ಪಂತ್ ಮತ್ತೆ ಕ್ರಿಕೆಟ್ ಗೆ ಮರಳಿದ್ದಾರೆ. ಐಪಿಎಲ್‌ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ