ತುಮಕೂರು: ಬೆಳ್ಳಂಬೆಳಗ್ಗೆ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ದೊಡ್ಡಗುಣಿ ಸಮೀಪ ನಡೆದಿದೆ.
ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ.
ತುಮಕೂರು-ಶಿವಮೊಗ್ಗ ನ್ಯಾಷನಲ್ ಹೆದ್ದಾರಿ 206ರಲ್ಲಿ ಈ ಘಟನೆ ಸಂಭವಿಸಿದೆ. ಗಿರೀಶ್ (37), ಮಾನ್ಯ (17), ಮೃತ ದುರ್ದೈವಿಗಳು. ಇವರಿಬ್ಬರೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.
ನಿಟ್ಟೂರು ಕಡೆಯಿಂದ ತುಮಕೂರು ಕಡೆಗೆ ಝೈಲೋ ಕಾರು ಬರುತ್ತಿದ್ದರೆ, ಬೆಂಗಳೂರು ಕಡೆಯಿಂದ ಶಿವಮೊಗ್ಗ ಕಡೆಗೆ ಹೋಗುತ್ತಿದ್ದ ಬಸ್ ಹೊರಟಿತ್ತು. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.