ಜೂ. 20: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ಬೆಂಗಳೂರಿನಲ್ಲಿ ಐಐಎಸ್‌ಸಿ ಹಾಗೂ ಡಾ. ಬಿ. ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಟ್ಟಡ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಮೋದಿ ಭೇಟಿ ಹಿನ್ನಲೆಯಲ್ಲಿ ಸೋಮವಾರ ಬೆಂಗಳೂರಿನಲ್ಲಿ ಶಾಲಾ-ಕಾಲೇಜುಗಳನ್ನು ಮುಚ್ಚುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಟೀಕಿಸಿದ್ದಾರೆ.
ಪ್ರಧಾನಿ ಮೋದಿಯವರ ಭೇಟಿಯಿಂದಾಗಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆಯಿಂದ ಶಾಲೆಗಳನ್ನು ಮುಚ್ಚಿರುವುದು ಸಮರ್ಥನೀಯವೇ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರರು ಆಗಿರುವ ಅಂಜಲಿ ಪ್ರಶ್ನಿಸಿದ್ದಾರೆ. ಕರ್ನಾಟಕದಲ್ಲಿ ಶಿಕ್ಷಣ ಎಂತಹ ತಮಾಷೆಯಾಗಿದೆ ಎಂದು ಅವರು ಲೇವಡಿ ಮಾಡಿದ್ದಾರೆ.
ಅಂಜಲಿ ನಿಂಬಾಳ್ಕರ್ ತಮ್ಮ ಟ್ವಿಟರ್ ಪೋಸ್ಟ್‌ನಲ್ಲಿ ಟ್ರಾಫಿಕ್ ಜಾಮ್ ಆಗುವ ಕಾರಣವನ್ನು ಉಲ್ಲೇಖಿಸಿ ಪ್ರಧಾನಿಗಳ ಭೇಟಿಯಿಂದಾಗಿ ಬೆಂಗಳೂರಿನಲ್ಲಿ ಸೋಮವಾರ ಶಾಲೆಗಳನ್ನು ಬಂದ್ ಮಾಡಿಸಲಾಗಿದೆ. ಇದು ಸಹ ಸಮರ್ಥನೆಯೇ? ವಿದ್ಯಾವಂತ ವರ್ಗ ಎಂದು ಕರೆಯಲ್ಪಡುವವರು ಇದನ್ನು ಹೇಗೆ ಸಹಿಸಿಕೊಳ್ಳುತ್ತಿದ್ದಾರೆ? ಕರ್ನಾಟಕದಲ್ಲಿ ಶಿಕ್ಷಣ ಎಂತಹ ತಮಾಷೆಯಾಗಿದೆ? ಜೂನ್ 20 ಸೋಮವಾರದಂದು ಬೆಂಗಳೂರಿನಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
https://twitter.com/DrAnjaliTai/status/1538732697446625280/photo/1