ಹಿರೇಬಾಗೇವಾಡಿ: ಇಲ್ಲಿನ ಬಡೇಕೊಳ್ಳಮಠ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸೋಮವಾರ ಅಪರಿಚಿತ ವಾಹನ ಡಿಕ್ಕಿ ಹೊಡೆದು ನವಿಲು ಸ್ಥಳದಲ್ಲೇ ಸಾವನ್ನಪ್ಪಿದೆ.
ಹೆದ್ದಾರಿ ಒಂದು ಬದಿಯಿಂದ ಮತ್ತೊಂದು ಬದಿಗೆ ದಾಟುವಾಗ ನವಿಲಿಗೆ ವಾಹನ ಡಿಕ್ಕಿ ಹೊಡೆದಿದೆ.
ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಅರಣ್ಯ ಇಲಾಖೆಯವರಿಗೆ ಮೃತ ನವಿಲು ಒಪ್ಪಿಸಿದರು.
Laxmi News 24×7