Breaking News

ಧನ ಸಂಪತ್ತಿಗಾಗಿ ಆರೋಗ್ಯ ಸಂಪತ್ತು ನಿರ್ಲಕ್ಷ್ಯ: ಶಿವಾಚಾರ್ಯ ಸ್ವಾಮೀಜಿ ಕಳವಳ

Spread the love

ಬೆಳಗಾವಿ: ‘ಎಲ್ಲ ಸಂಪತ್ತುಗಳಿಗಿಂತ ಆರೋಗ್ಯ ಸಂಪತ್ತು ದೊಡ್ಡದು. ಇಂದು ಎಲ್ಲರೂ ಧನ ಸಂಪತ್ತಿಗಾಗಿ ಆರೋಗ್ಯ ಸಂಪತ್ತು ನಿರ್ಲಕ್ಷಿಸುತ್ತಿದ್ದಾರೆ’ ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.

 

ಇಲ್ಲಿನ ಹುಕ್ಕೇರಿ ಹಿರೇಮಠದಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಯೋಗ ಶಿಬಿರದಲ್ಲಿ ಮಾತನಾಡಿದ ಅವರು, ‘ಇಂದು ಜನರು ಆರೋಗ್ಯ ಕಡೆಗಣಿಸುತ್ತಿದ್ದಾರೆ. ಬಳಿಕ ಜೀವನವಿಡೀ ಗಳಿಸಿದ ಹಣವನ್ನು ಆರೋಗ್ಯಕ್ಕಾಗಿ ವ್ಯಯಿಸುತ್ತಿದ್ದಾರೆ. ಯೋಗದಿಂದ ಆರೋಗ್ಯ ಮತ್ತು ಮಾನಸಿಕ ಶಾಂತಿ ಹೊಂದಲು ಸಾಧ್ಯ’ ಎಂದು ಅಭಿಪ್ರಾಯಪಟ್ಟರು.

ಯೋಗ ಶಿಬಿರದಲ್ಲಿ ಭಾಗವಹಿಸಿದ್ದ ಶಿಬಿರಾರ್ಥಿಗಳಿಗೆ ರುದ್ರಾಕ್ಷಿ ಮತ್ತು ಮಾಸ್ಕ್ ವಿತರಿಸಲಾಯಿತು. ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು.


Spread the love

About Laxminews 24x7

Check Also

ಜನ್ಮದಿನ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ, ಮೃಣಾಲ್

Spread the loveಬೆಳಗಾವಿ : ಶನಿವಾರ ಬೆನಕನಹಳ್ಳಿಯ ಗಾರ್ಡನ್ ಕೋರ್ಟ್ ಮುಂಬಾಗದಲ್ಲಿ ಹಿರಿಯ ನಾಗರಿಕರೊಂದಿಗೆ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ