Breaking News
Home / ಜಿಲ್ಲೆ / ಬೆಳಗಾವಿ /  15 ವರ್ಷಗಳ ಹಿಂದೆ ಗ್ಯಾಂಗ್‌ಸ್ಟಾರ್ ಪ್ರವೀಣ ಶಿಂತ್ರೆಯನ್ನು ಎನ್‌ಕೌಂಟರ್ ಮಾಡಿದ ಬಳಿಕ ಈಗ ಬೆಳಗಾವಿಯಲ್ಲಿ ಮತ್ತೊಮ್ಮೆ ಗುಂಡಿನ ಸದ್ದು

 15 ವರ್ಷಗಳ ಹಿಂದೆ ಗ್ಯಾಂಗ್‌ಸ್ಟಾರ್ ಪ್ರವೀಣ ಶಿಂತ್ರೆಯನ್ನು ಎನ್‌ಕೌಂಟರ್ ಮಾಡಿದ ಬಳಿಕ ಈಗ ಬೆಳಗಾವಿಯಲ್ಲಿ ಮತ್ತೊಮ್ಮೆ ಗುಂಡಿನ ಸದ್ದು

Spread the love

ಬೆಳಗಾವಿ: 15 ವರ್ಷಗಳ ಹಿಂದೆ ಗ್ಯಾಂಗ್‌ಸ್ಟಾರ್ ಪ್ರವೀಣ ಶಿಂತ್ರೆಯನ್ನು ಎನ್‌ಕೌಂಟರ್ ಮಾಡಿದ ಬಳಿಕ ಈಗ ಬೆಳಗಾವಿಯಲ್ಲಿ ಮತ್ತೊಮ್ಮೆ ಗುಂಡಿನ ಸದ್ದು ಮಾರ್ದನಿಸಿದ್ದು, ಕೊಲೆ, ಸುಲಿಗೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಮಂಗಳವಾರ ಬೆಳಗಿನ ಜಾವ ನಗರದ ಧರ್ಮನಾಥ ಭವನ ಸಮೀಪ ಪೊಲೀಸರ ಮೇಲೆ ಅಟ್ಯಾಕ್ ಮಾಡಲು ಮುಂದಾದಾಗ ಪೊಲೀಸರು ಗುಂಡು ಹಾರಿಸುವ ಮೂಲಕ ಆತನನ್ನು ಹೆಡೆಮುರಿ ಕಟ್ಟಿದ್ದಾರೆ.

 

ಮೂಲತಃ ಕಿತ್ತೂರು ತಾಲೂಕಿನ ಚಿಕ್ಕನಂದಿ ಗ್ರಾಮದ ಸದ್ಯ ಶಾಸ್ತ್ರಿ ನಗರದ ನಿವಾಸಿ ವಿಶಾಲಸಿಂಗ್ ವಿಜಯಸಿಂಗ್ ಚವ್ಹಾಣ(25) ಎಂಬ ಆರೋಪಿಯ ಕಾಲಿಗೆ ಗುಂಡು ಹಾರಿಸಲಾಗಿದ್ದು, ಈತನ ಮೊಣಕಾಲಿಗೆ ಗುಂಡು ಹೊಡೆಯಲಾಗಿದೆ. ಗಂಭೀರ ಗಾಯಗೊಂಡ ಈತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವೀಂದ್ರ ಗಡಾದಿ ಹಾಗೂ ಅವರ ತಂಡ ಗುಂಡಿನ ದಾಳಿ ನಡೆಸಿದೆ. ಹಲವು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ವಿಶಾಲಸಿಂಗ್ ಪೊಲೀಸರ ಮೇಲೆಯೇ ದಾಳಿ ನಡೆಸಲು ಯತ್ನಿಸಿದ್ದಾನೆ. ಕೂಡಲೇ ಪೊಲೀಸರು ಈತನ ಮೇಲೆ ಗುಂಡು ಹಾರಿಸಿ ಸಾಹಸ ಮೆರೆದಿದ್ದಾರೆ. ಈ ಮೂಲಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಸಮಾಜದಲ್ಲಿ ಅಶಾಂತಿ ಭಂಗವನ್ನುಂಟು ಮಾಡುತ್ತಿದ್ದವರಿಗೆ ತಕ್ಕ ಪಾಠ ಕಲಿಸಿದೆ.

 

ಶೀತಲ ಚೌಗುಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರವೀಣ ಶಿಂತ್ರೆಯನ್ನು 6 ಸೆಪ್ಟೆಂಬರ್ 2007ರಂದು ಬೆಳಗಿನ ಜಾವ ಬೆಳಗಾವಿಯ ಲಕ್ಷ್ಮೀ ನಗರದ ರಾಜದೀಪ ಬಂಗ್ಲೆಯಲ್ಲಿ ಎನ್‌ಕೌಂಟರ್ ಮಾಡಲಾಗಿತ್ತು. ಈಗ ಅದೇ ರೀತಿಯಲ್ಲಿ ಬೆಳಗಾವಿಯಲ್ಲಿ ಇನ್ನೊಂದು ಗುಂಡಿನ ದಾಳಿ ಆಗಿದ್ದು, ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದವರಿಗೆ ನಡುಕ ಹುಟ್ಟಿಸಿದೆ.


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ