Breaking News

ಅಧಿಕಾರಿಗಳು ಸ್ವಯಂ ರಕ್ಷಣೆಗೆ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ: ಡಾ. ಬೋರಲಿಂಗಯ್ಯ

Spread the love

ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ಕೊಲೆ ಪ್ರಕರಣದ ಆರೋಪಿ ವಿಶಾಲ್ ಸಿಂಗ್ ಮೇಲೆ ಪೊಲೀಸ್ ಫೈರಿಂಗ್ ನಡೆದಿದೆ. ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ ಹಿನ್ನೆಲೆ ನಮ್ಮ ಅಧಿಕಾರಿಗಳು ಸ್ವಯಂ ರಕ್ಷಣೆಗೆ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ನಗರಪೊಲೀಸ್ ಆಯುಕ್ತರಾದ ಡಾ. ಬೋರಲಿಂಗಯ್ಯ ಹೇಳಿದ್ದಾರೆ.

ಕೊಲೆ ಆರೋಪಿ ವಿಶಾಲ್ ಸಿಂಗ್ ಮೇಲೆ ಪೊಲೀಸ್ ಫೈರಿಂಗ್ ಕುರಿತಂತೆ ಮಾಧ್ಯಮಗಳಿಗೆ ನಗರಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ, ಬೆಳಗಾವಿ ಗ್ರಾಮಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಅಧಿಕಾರಿಗಳು ಆರೋಪಿಯೊಬ್ಬನನ್ನು ಬಂಧಿಸಲು ಪ್ರಯತ್ನಿಸುತ್ತಿದ್ದರು. ಆದರೆ ಆತ ಕಳೆದ ಮಾರ್ಚ್‍ನಿಂದ ತಲೆಮರೆಸಿಕೊಂಡಿದ್ದ. ನಿನ್ನೆ ಆರೋಪಿಯನ್ನು ಬಂಧಿಸಲು ಹೋದಾಗ ಆರೋಪಿಯು ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾನೆ.

ಈ ವೇಳೆ ಸ್ವಯಂ ರಕ್ಷಣೆಯ ಹಿನ್ನೆಲೆಯಲ್ಲಿ ನಮ್ಮ ಅಧಿಕಾರಿಗಳು ಅವನ ಮೇಲೆ ಫೈರಿಂಗ್ ಮಾಡಿದ್ದಾರೆ. ಈ ವೇಳೆ ಆರೋಪಿಯ ಕಾಲಿಗೆ ಗಾಯವಾಗಿದೆ. ಈ ಕುರಿತಂತೆ ತನಿಖೆ ನಡೆಸಿದ್ದಾರೆ. ಆರೋಪಿಯು ಹಗಲವಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಇನ್ನೂ ಯಾವ ಯಾವ ಪ್ರಕರಣಗಳಲ್ಲಿ ಈತನ ಮೇಲೆ ಕೇಸ್ ದಾಖಲಾಗಿವೆ ಎಂಬುದರ ಕುರಿತಂತೆ ತನಿಖೆ ಮಾಡಲಾಗುತ್ತಿದೆ.


Spread the love

About Laxminews 24x7

Check Also

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

Spread the love ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ