Breaking News

SSLC ಪ್ರಥಮ ದರ್ಜೆಯಲ್ಲಿ ಪಾಸಾದವರಿಗೆ 15 ಸಾವಿರ ರೂ. ಪ್ರೋತ್ಸಾಹಧನ

Spread the love

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಶೇ.60 ರಿಂದ 74.99 ಅಂಕ ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 7,000 ರೂ. ನೀಡಲಾಗುವುದು.

ಶೇ. 75 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 15,000 ರೂ.

ಪ್ರೋತ್ಸಾಹಧನವನ್ನು ಡಿ.ಬಿ.ಟಿ. ಪೋರ್ಟಲ್ ಮೂಲಕ ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದೆ. ಆ ಪ್ರಕಾರ ಬ್ಯಾಂಕ್ ಉಳಿತಾಯ ಖಾತೆಗೆ ಆಧಾರ್ ಲಿಂಕ್ ಆದ ವಿದ್ಯಾರ್ಥಿಗಳಿಗೆ ಈಗಾಗಲೇ ಪ್ರೋತ್ಸಾಹಧನ ಜಮೆಯಾಗಿರುತ್ತದೆ.

ಬ್ಯಾಂಕ್ ಖಾತೆಗೆ ಆಧಾರ್ ಸೀಡ್ ಆಗದ 2020ನೇ ಸಾಲಿನ 302 ವಿದ್ಯಾರ್ಥಿಗಳು ಮತ್ತು 2021ನೇ ಸಾಲಿನ 2086 ಪ.ಜಾತಿ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಉಳಿತಾಯ ಖಾತೆಗೆ ಆಧಾರ್ ಲಿಂಕ್ ಮಾಡಿಸಿ ಸಂಬಂಧಿಸಿದ ಸಮಾಜ ಕಲ್ಯಾಣ ಇಲಾಖೆಗೆ ಆಧಾರ್ ಕಾರ್ಡ್ ಮತ್ತು ಎಸ್.ಎಸ್.ಎಲ್.ಸಿ. ಅಂಕಪಟ್ಟಿಯನ್ನು ಸಲ್ಲಿಸಿ ಆನ್‍ಲೈನ್‍ನಲ್ಲಿ ಅಪ್‍ಡೇಟ್ ಮಾಡಿಸಬೇಕಾಗಿರುತ್ತದೆ.

ಆದ್ದರಿಂದ 2020 ಮತ್ತು 2021ನೇ ಸಾಲಿನಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿ ಪ್ರೋತ್ಸಾಹಧನ ಜಮೆಯಾಗದಿರುವ ವಿದ್ಯಾರ್ಥಿಗಳು ಸಂಬಂಧಿಸಿದ ಸಮಾಜ ಕಲ್ಯಾಣ ಇಲಾಖೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ BRP?*

Spread the love ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ