Breaking News

2024ರ ಲೋಕಸಭೆ ಚುನಾವಣೆ ಬಳಿಕ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ: ಉಮೇಶ್ ಕತ್ತಿ

Spread the love

ಬೆಳಗಾವಿ: 2024ರ ಲೋಕಸಭೆ ಚುನಾವಣೆ ಬಳಿಕ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂದು‌ ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗುವುದು ನಿಶ್ಚಿತ. 2024 ರ ಲೋಕಸಭಾ ಚುನಾವಣೆ ನಂತರ ಕರ್ನಾಟಕ 2 ರಾಜ್ಯವಾಗಲಿದೆ. ದೇಶದಲ್ಲಿ 50 ಹೊಸ ರಾಜ್ಯಗಳಾಗಲಿದ್ದು, ಈ ಕುರಿತು ಚರ್ಚೆ ಈಗಾಗಲೇ ನಡೆಯುತ್ತಿದೆ ಎಂದಿದ್ದಾರೆ. 

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗುವುದು ಖಚಿತ. ನಾವು ನೀವು ಸೇರಿ ಮಾಡೋಣ. ಮಹಾರಾಷ್ಟ್ರದಲ್ಲಿ 3, ಉತ್ತರ ಪ್ರದೇಶದಲ್ಲಿ 4, ಕರ್ನಾಟಕದಲ್ಲಿ 2 ರಾಜ್ಯಗಳಾಗಲಿವೆ. ಉತ್ತರ ಕರ್ನಾಟಕ ರಾಜ್ಯವಾಗಲೇಬೇಕು ಎಂದು ಹೇಳಿದ್ದಾರೆ.

ಬೆಂಗಳೂರಲ್ಲಿ ಕುಡಿಯಲು ನೀರಿಲ್ಲ. ಬೆಂಗಳೂರು ಟ್ರಾಫಿಕ್ ಜಾಮ್ ಹೇಳತೀರದು. 10 ಕಿಮೀ ಹೋಗಲು 1 ತಾಸು ಬೇಕು. ನನ್ನ ಮನೆಯಿಂದ ವಿಧಾನಸೌಧಕ್ಕೆ ಹೋಗಲು ಒಂದೂವರೆ ಗಂಟೆ ಬೇಕು. ನಡೆದುಕೊಂಡು ಹೋದರೆ ಅದಕ್ಕಿಂತ ಬೇಗ ಹೋಗಬಹುದು. ಸದ್ಯ ಬೆಳಗಾವಿಯಲ್ಲಿ ವಿಧಾನಸೌಧ ಆಗಿದೆ. ಹುಬ್ಬಳ್ಳಿ-ಧಾರವಾಡದಲ್ಲಿ ಹೈಕೋರ್ಟ್ ಆಗಿದೆ. ಕಿತ್ತೂರಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಚರ್ಚೆ ನಡೆದಿದೆ. ಹಾಗಾಗಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲು ಎಲ್ಲ ಸೌಲಭ್ಯಗಳಿವೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ