Breaking News

ಸಾಹುಕಾರ ಮುಂಬೈ ನಲ್ಲೇ ಠಿಕಾಣಿ ದೇವೇಂದ್ರ ಫಡ್ನವಿಸ್‌ ಇಂದು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚಿಸಲು ಅನುಮತಿ ,ಕೇಳುವ ಸಾಧ್ಯತೆ.?

Spread the love

ಮುಂಬೈ: ಮಹಾ ವಿಕಾಸ ಅಘಾಡಿ ಸರ್ಕಾರಿ ಪತನಗೊಳ್ಳುವುದು ಅಧಿಕೃತವಾಗುತ್ತಿದ್ದಂತೆ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್‌ ಇಂದು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚಿಸಲು ಅನುಮತಿ ಕೇಳುವ ಸಾಧ್ಯತೆಯಿದೆ.

ಇಂದು ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರಿಗೆ ತಮ್ಮ ಸರ್ಕಾರಕ್ಕೆ ಬೆಂಬಲ ನೀಡುವ ಶಾಸಕರ ಪಟ್ಟಿಯನ್ನು ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ

ಬುಧವಾರ ಬಿಜೆಪಿ ನಾಯಕ, ಕೇಂದ್ರ ಸಚಿವ ರಾವ್‌ಸಹೇಬ್‌ ಪಾಟೀಲ್‌ ಶಿವಸೇನೆ ಆಂತರಿಕ ಬಿಕ್ಕಟ್ಟಿನಿಂದ ಆಜಕೀಯ ಅಸ್ಥಿರತೆ ಸೃಷ್ಟಿಯಾಗಿದೆ. ಬಿಜೆಪಿ ಸರ್ಕಾರ ರಚನೆಗೆ ಮುಂದಾಗುವುದಿಲ್ಲ. ಅಷ್ಟೇ ಅಲ್ಲದೇ ಪಕ್ಷ ಶಿವಸೇನೆ ಶಾಸಕರ ಜೊತೆ ಸಂಪರ್ಕದಲ್ಲಿ ಇಲ್ಲ ಎಂದು ತಿಳಿಸಿದ್ದರು.

ಶಿವಸೇನೆ ಶಾಸಕರು ಒಬ್ಬೊಬ್ಬರಾಗಿ ಏಕನಾಥ್ ಶಿಂಧೆ ಟೀಂನ್ನು ಸೇರಿಕೊಳ್ಳುತ್ತಿದ್ದು ಈಗ ಶಾಸಕ ಮಂಗೇಶ್ ಶಿಂಧೆ ತೆರಳಿದ್ದಾರೆ. 

ಇತ್ತ ಸಿಎಂ ಉದ್ಧವ್ ಠಾಕ್ರೆ ಸಿಎಂ ಅಧಿಕೃತ ನಿವಾಸ ವರ್ಷಾವನ್ನು ತೊರೆದಿದ್ದಾರೆ. ಲಗೇಜ್ ಸಮೇತ ಕುಟುಂಬದ ಮನೆ ಮಾತೋಶ್ರೀಗೆ ಶಿಫ್ಟ್ ಆಗಿದ್ದು, ಉದ್ಧವ್ ಠಾಕ್ರೆ ನಡೆ ತೀವ್ರ ಕುತೂಹಲ ಕೆರಳಿಸಿದೆ. ಇದೇ ವೇಳೆ ಬೆಂಬಲಿಗರು ಅಡ್ಡಗಟ್ಟಿ ರಾಜೀನಾಮೆ ನೀಡದಂತೆ ಕೂಗಿದ್ದಾರೆ.

 


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ