Breaking News

ಸಿಎಂ ಕೂರಲು, ಏಳಲು ಸಹ ದೆಹಲಿಗೆ ಹೋಗಿ ಪರ್ಮಿಶನ್ ಪಡೆದು ಬರಬೇಕು!

Spread the love

ಬೆಂಗಳೂರು, ಜೂನ್ 24; ಕರ್ನಾಟಕದ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿನವದೆಹಲಿ ಪ್ರವಾಸದಲ್ಲಿದ್ದಾರೆ.

2021ರ ಜುಲೈ 28ರಂದು ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡ ಬಳಿಕ 11ನೇ ಬಾರಿ ಅವರು ದೆಹಲಿಗೆ ತೆರಳಿದ್ದಾರೆ.

ಪ್ರತಿಪಕ್ಷ ಕಾಂಗ್ರೆಸ್ ಬಸವರಾಜ ಬೊಮ್ಮಾಯಿ ನವದೆಹಲಿ ಭೇಟಿ ಬಗ್ಗೆ ಟ್ವೀಟ್ ಮಾಡಿದೆ. “ಸಿಎಂ ಕೂರಲು, ಏಳಲು, ಮಲಗಲೂ ಸಹ ದೆಹಲಿಗೆ ಹೋಗಿ ಪರ್ಮಿಶನ್ ಪಡೆದು ಬರಬೇಕು ಎನಿಸುತ್ತದೆ!” ಎಂದು ಟೀಕಿಸಿದೆ.

 

ಗುರುವಾರ ಬಸವರಾಜ ಬೊಮ್ಮಾಯಿ ದೆಹಲಿಗೆ ಭೇಟಿ ನೀಡಿದ್ದಾರೆ. ಕೇಂದ್ರ ಸಚಿವ, ಧಾರವಾಡ ಸಂಸದ ಪ್ರಹ್ಲಾದ್ ಜೋಶಿಯನ್ನು ಅವರು ಭೇಟಿಯಾಗಿದ್ದರು. ಶುಕ್ರವಾರ ಸಂಜೆ ಮುಖ್ಯಮಂತ್ರಿಗಳು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

 

ರಾಷ್ಟ್ರಪತಿ ಚುನಾವಣೆ ಹಿನ್ನಲೆಯಲ್ಲಿ ಬಸವರಾಜ ಬೊಮ್ಮಾಯಿ ಮಾತ್ರವಲ್ಲ ಬಿಜೆಪಿ ಆಡಳಿತ ಇರುವ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ದೆಹಲಿಗೆ ತೆರಳಿದ್ದಾರೆ. ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮ ಅವರ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಲು ಮುಖ್ಯಮಂತ್ರಿಗಳು ದೆಹಲಿಯಲ್ಲಿದ್ದಾರ

ದೆಹಲಿಯಲ್ಲಿಯೇ ಒಂದು ಮನೆ ಮಾಡಿಕೆಪಿಸಿಸಿ ಬಸವರಾಜ ಬೊಮ್ಮಾಯಿ ದೆಹಲಿ ಭೇಟಿ ಬಗ್ಗೆ ಟ್ವೀಟ್ ಮಾಡಿದ್ದು, ಬೊಮ್ಮಾಯಿಯವರು ಮುಖ್ಯಮಂತ್ರಿಯಾದ ನಂತರ 11ನೇ ಬಾರಿ ದೆಹಲಿಗೆ ಹೋಗುತ್ತಿದ್ದಾರೆ, ಬಿಜೆಪಿಯ ಹೈಕಮಾಂಡ್ ಕಮಾಂಡಿಂಗ್ ಈ ಪರಿ ಇದೆಯೇ!. ಸಿಎಂ ದೆಹಲಿ ಪ್ರವಾಸದಿಂದ ರಾಜ್ಯಕ್ಕೆ ನಯಾಪೈಸೆ ಲಾಭವಿಲ್ಲ, ಬಸವರಾಜ ಬೊಮ್ಮಾಯಿ ಅವರೇ ದೆಹಲಿಯಲ್ಲೇ ಒಂದು ಮನೆ ಮಾಡಿಬಿಡಿ!” ಎಂದು ಟ್ವೀಟ್‌ನಲ್ಲಿ ಸಲಹೆ ನೀಡಲಾಗಿದೆ.

 

ಮುಖ್ಯಮಂತ್ರಿಗಳ ದೆಹಲಿ ಭೇಟಿ

ಜೂನ್ 17ರಂದು ಬಸವರಾಜ ಬೊಮ್ಮಾಯಿ ಒಂದು ದಿನ ದೆಹಲಿ ಭೇಟಿ ಕೈಗೊಂಡಿದ್ದರು. ಜೂನ್ 18ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಕರ್ನಾಟಕಕ್ಕೆ ಆಗಮಿಸಿದ್ದರು. ಬಳಿಕ ಜೂನ್ 20, 21ರಂದು ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿದ್ದರು. ಈಗ ಮತ್ತೆ ಬಸವರಾಜ ಬೊಮ್ಮಾಯಿ ದೆಹಲಿಗೆ ಭೇಟಿ ನೀಡಿದ್ದು, ಕಾಂಗ್ರೆಸ್ ಟೀಕೆಗೆ ಕಾರಣವಾಗಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ