Breaking News
Home / ರಾಜಕೀಯ / 2023ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ: ಸತೀಶ್ ಜಾರಕಿಹೊಳಿ

2023ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ: ಸತೀಶ್ ಜಾರಕಿಹೊಳಿ

Spread the love

ತಳ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ, ಬಲಪಡಿಸಿದರೆ 2023ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

ಘಟಪ್ರಭಾ ಪಟ್ಟಣದ ಡಾ.ಎನ್.ಎಸ್.ಹರ್ಡೇಕರ್ ಮಂಜಪ್ಪ ತರಬೇತಿ ಕೇಂದ್ರದಲ್ಲಿ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ನವ ಸಂಕಲ್ಪ ಚಿಂತನಾ ಶಿಬಿರವನ್ನು ಉದ್ಘಾಟಿಸಿ ಸತೀಶ ಜಾರಕಿಹೊಳಿ ಅವರು ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ತಾಂತ್ರಿಕತೆ ಬಹಳಷ್ಟು ಅಭಿವೃದ್ಧಿ ಹೊಂದಿದ್ದು, ಹೀಗಾಗಿ ಚುನಾವಣೆಗಳನ್ನು ಗೆಲ್ಲಬೇಕಾದರೆ ತಾಂತ್ರಿಕತೆ ಅಳವಡಿಸಿಕೊಳ್ಳಬೇಕು.

ಅಂದಾಗ ನಾವು ಬೆಳಗಾವಿ ಜಿಲ್ಲೆಯಲ್ಲಿ 18ರಲ್ಲಿ 12 ಸೀಟುಗಳನ್ನು ಗೆಲ್ಲಬಹುದು. ಕಳೆದ 8 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಭಿವೃದ್ದಿಗೆ ಆದ್ಯತೆ ನೀಡುತ್ತಿಲ್ಲ. ಭ್ರಷ್ಟಾಚಾರವೂ ಮಿತಿ ಮೀರಿದೆ. ಕಳಪೆ ಆಡಳಿತ ನೀಡುತ್ತಿದ್ದು, ಆರ್ಥಿಕತೆ ಹಳ್ಳ ಹಿಡಿದಿದೆ. ಹೀಗಾಗಿ ದೇಶ, ರಾಜ್ಯದ ಜನತೆ ಬೇಸತ್ತಿದ್ದಾರೆ ಎಂದು ಕಿಡಿಕಾರಿದರು.ದೇಶ, ರಾಜ್ಯ ಸೇರಿದಂತೆ ಎಲ್ಲಾ ಸಮಾಜದವರೂ ಪ್ರಗತಿ ಕಾಣಬೇಕಾದರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಅನಿವಾರ್ಯವಾಗಿದೆ. ಕಾರಣ ಯುವ ಜನತೆ ಎಚ್ಚರ ವಹಿಸುವುದು ಅಗತ್ಯವಿದೆ. ಅದೇ ಕಾರಣದಿಂದ ಘಟಪ್ರಭ ಪಟ್ಟಣದ ಸೇವಾದಳದಲ್ಲಿ ಕಾರ್ಯಕರ್ತರಿಗೆ ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.

ಇದೇ ವೇಳೆ ಕಾರ್ಯಕ್ರಮಕ್ಕೂ ಮುನ್ನ ಸೇವಾದಳದ ವತಿಯಿಂದ ಧ್ವಜಾರೋಹಣ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕಿಯರಾದ ಲಕ್ಷ್ಮೀ ಹೆಬ್ಬಾಳಕರ್, ಅಂಜಲಿ ನಿಂಬಾಳ್ಕರ್, ಮಾಜಿ ಶಾಸಕರಾದ ಅಶೋಕ ಪಟ್ಟಣ, ರಮೇಶ ಕುಡಚಿ, ಆರ್.ಬಿ.ಪಾಟೀಲ್, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಕಾಂಗ್ರೆಸ್ ಮುಖಂಡರಾದ ಟಿ. ಈಶ್ವರ, ಮಹಾವೀರ ಮೋಹಿತೆ, ಸದಾನಂದ ಡಂಗಣ್ಣವರ್, ಸುನೀಲ್ ಹಣಮಣ್ಣವರ್, ದಯಾನಂದ ಪಾಟೀಲ್ ಸೇರಿದಂತೆ 300ರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಇದ್ದರು.


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ