Breaking News

ನನಗೆ ಮಾಟ ಮಂತ್ರ ಮಾಡಿಸಿದವರನ್ನು ಶಿಕ್ಷಿಸಿದ್ರೆ 50,001 ಕಾಣಿಕೆ ಕೊಡುವೆ: ಸವದತ್ತಿ ಯಲ್ಲಮ್ಮನಿಗೆ ಭಕ್ತನ ಪತ್ರ

Spread the love

ಬೆಳಗಾವಿ: ಎರಡು ದಿನಗಳ ಕಾಲ ನಡೆದ ಸವದತ್ತಿ ಯಲ್ಲಮ್ಮನಗುಡ್ಡದ ರೇಣುಕಾದೇವಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಸುಕಿನ ಜಾವ ಮುಕ್ತಾಯಗೊಂಡಿದೆ. 40 ದಿನದಲ್ಲಿ 1.13 ಕೋಟಿ ರೂ. ನಗದು ಸಂಗ್ರಹವಾಗಿದೆ. 22 ಲಕ್ಷ‌ ರೂ. ಮೌಲ್ಯದ ಚಿನ್ನ, 3.86 ಲಕ್ಷ ರೂ ಮೌಲ್ಯದ ಬೆಳ್ಳಿ ಆಭರಣ ದೇಣಿಗೆ ರೂಪದಲ್ಲಿ ಬಂದಿದೆ.

ದೇವಸ್ಥಾನದ ಹುಂಡಿಯಲ್ಲಿ ಹಣದ ಜೊತೆಗೆ ಭಕ್ತರು ಹಾಕಿದ ಚಿತ್ರ ವಿಚಿತ್ರ ಪತ್ರಗಳು ಪತ್ತೆಯಾಗಿವೆ. ಪತ್ರವನ್ನು ಹುಂಡಿಗೆ ಹಾಕಿದರೆ ದೇವಿ ನಮ್ಮ ಕೋರಿಕೆ ಈಡೇರಿಸುತ್ತಾಳೆ ಎಂಬ ನಂಬಿಕೆ ಭಕ್ತರದ್ದು. ಭಕ್ತರ ವಿಚಿತ್ರ ಕೋರಿಕೆ ಪತ್ರಗಳನ್ನ ಕಂಡು ಹುಂಡಿ ಎಣಿಕೆ ಸಿಬ್ಬಂದಿ ಅಚ್ಚರಿಗೊಂಡಿದ್ದಾರೆ.

ಭಕ್ತನೊಬ್ಬ ಹಲವು ಕೋರಿಕೆಯೊಂದಿಗೆ ಪತ್ರ ಬರೆದು ಹುಂಡಿಗೆ ಹಾಕಿದ್ದಾರೆ. ನನಗೆ ಮಾಟ ಮಂತ್ರ ಮಾಡಿಸಿದ ವ್ಯಕ್ತಿಯನ್ನು ಶಿಕ್ಷಿಸಿದರೆ 50,001 ಕಾಣಿಕೆ ನೀಡುತ್ತೇನೆ. ನನ್ನ ವ್ಯವಹಾರಕ್ಕೆ ಮಾಟ ಮಂತ್ರ ಮಾಡಿಸಿದ್ದಾರೆ. ಇದರಿಂದ ಸಾಲಗಾರರ ಕಾಟ ಶುರುವಾಗಿದೆ. ಆನ್​​ಲೈನ್ ಗೇಮ್​​ನಲ್ಲಿ ಕಳೆದುಕೊಂಡ ಹಣ ಮರಳಿ ಬರುವಂತೆ ಮಾಡು ತಾಯಿ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ ಆನ್​​ಲೈನ್ ಆಡಲು ಮನಸ್ಸು ಬರದಂತೆ ಮಾಡು ಎಂದೂ ಭಕ್ತ ಮನವಿ ಮಾಡಿಕೊಂಡಿದ್ದಾ‌ನೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ